October 5, 2025

ಚುಟುಕು ಬ್ರಹ್ಮ ದಿನಕರ ದೇಸಾಯಿ ಜನ್ಮದಿನಾಚಣೆ

ಹೊನ್ನಾವರ: ದಿನಕರ ದೇಸಾಯಿ ಅವರು ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನು ನೀಡಿ ಉತ್ತರ ಕನ್ನಡ ಜಿಲ್ಲೆಯ ಧ್ರುವತಾರೆಯಾಗಿದ್ದಾರೆ. ನಿಜವಾದ ಧರ್ಮ ಎಂದರೆ ಶಿಕ್ಷಣ; ಶಿಕ್ಷಣದಿಂದ ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ಅವರು ತೋರಿಸಿದ್ದಾರೆ ಎಂದು ಸಾಹಿತಿ ಎಚ್.ಎಸ್.ಗುನಗ ಹೇಳಿದರು.

ಹೊನ್ನಾವರ ತಾಲೂಕಿನ ಕಾಸರಕೋಡದ ಜನತಾ ವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ ಚುಟುಕು ಬ್ರಹ್ಮ ದಿನಕರ ದೇಸಾಯಿ ಅವರ ಜನ್ಮದಿನಾಚಣೆ ಕಾರ್ಯಕ್ರಮದಲ್ಲಿ ಅವರು `ಶಿಕ್ಷಣ ಕ್ಷೇತ್ರಕ್ಕೆ ದಿನಕರರ ಕೊಡುಗೆ’ ಕುರಿತು ಉಪನ್ಯಾಸ ನೀಡಿದರು. ವೈಶಿಷ್ಟöಪೂರ್ಣವಾಗಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿರುವ ದಿನಕರ ದೇಸಾಯಿ ಅವರು ಶಿಕ್ಷಣ ಕ್ಷೇತ್ರಕ್ಕೆ ಒಂದು ಮಾದರಿಯನ್ನು ಹಾಕಿಕೊಟ್ಟಿದ್ದಾರೆ. ಅವರು ಕಟ್ಟಿದ ಸಂಸ್ಥೆಗಳಿAದ ತುಳಿತಕ್ಕೆ ಒಳಗಾದ ಜನರು, ಹಿಂದುಳಿದ ಜನರು ಶಿಕ್ಷಣ ಪಡೆದು ಮೇಲೆ ಬರುವುದಕ್ಕೆ ಸಾಧ್ಯವಾಯಿತು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಎಸ್.ಟಿ.ಹೊರ್ಟಾ ಮಾತನಾಡಿ, ಸಮಾಜದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮಾತ್ರವಲ್ಲ ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅಪಾರವಾದುದು. ಅವರು ಕಾರ್ಮಿಕ ಮುಖಂಡರಾಗಿ ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಟ್ಟಿದ್ದಾರೆ. ರಾಜಕೀಯದಲ್ಲಿ ಕ್ಷೇತ್ರದಲ್ಲಿ ಸೇವೆಯನ್ನು ನೀಡಿದ್ದಾರೆ. ಹಲವಾರು ಕೃತಿಗಳನ್ನು ರಚಿಸಿ ಜನಸೇವೆಯನ್ನು ಮಾಡಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎಚ್.ಎಸ್.ಗೌಡ ಮಾತನಾಡಿ, ಚುಟುಕು ಬ್ರಹ್ಮ ಎಂದು ಪ್ರಸಿದ್ದಧಿ ಪಡೆದಿರುವ ದಿನಕರ ದೇಸಾಯಿ ಅವರು ಸಾಹಿತ್ಯದ ಜೊತೆಗೆ ಹಲವು ಕ್ಷೇತ್ರಗಳಲ್ಲಿ ಬ್ರಹ್ಮ ಎನಿಸಿಕೊಂಡಿದ್ದಾರೆ. ಸರಳ ಜೀವನದಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಜನ್ಮದಿನಾಚರಣೆಯನ್ನು ಸಾಹಿತಿಗಳು, ಶಿಕ್ಷಕರು, ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಸಂಭ್ರಮದಿAದ ಆಚರಿಸಲಾಗುತ್ತಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಚ್.ಎಂ.ಮಾರುತಿ, ನಿವೃತ್ತ ಮುಖ್ಯಾಧ್ಯಾಪಕ ಎಂ.ಎಚ್.ನಾಯ್ಕ, ಗ್ರಂಥಪಾಲಕ ಮಂಜುನಾಥ ಗೌಡ ಮಾತನಾಡಿದರು. ದಿನಕರ ದೇಸಾಯಿ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಸಾಪ ಕೋಶಾಧ್ಯಕ್ಷ ನಾರಾಯಣ ಹೆಗಡೆ, ಸದಸ್ಯರಾದ ಶುಭಾ ವಿಷ್ಣು ಸಭಾಹಿತ, ಎಂ.ಡಿ.ಹರಿಕಾAತ, ಶಿಕ್ಷಕರಾದ ಸಬಿತಾ ನರೋನ್ಹಾ, ಸೌಮ್ಯ ಹೆಗಡೆ, ರಾಜೇಶ ಕಾಕಡೆ, ಶಿವಣ್ಣ ಸವದಿ ಹಾಗೂ ವಿದ್ಯಾರ್ಥಿಗಳು ಇದ್ದರು. ಮುಖ್ಯಾಧ್ಯಾಪಕ ರವಿ ಪೂಜಾರಿ ಸ್ವಾಗತಿಸಿದರು. ವಿನಾಯಕ ಶೆಟ್ಟಿ ವಂದನಾರ್ಪಣೆ ಮಾಡಿದರು. ಅಶೋಕ ಜೋಸೆಫ್ ಕಾರ್ಯಕ್ರಮ ನಿರ್ವಹಿಸಿದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

About The Author

error: Content is protected !!