ಹೊನ್ನಾವರ: ತಹಶೀಲ್ದಾರ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಾಲೂಕಿನಲ್ಲಿ ತಂಬಾಕು ದಾಳಿಯನ್ನು ಕಾಸರಕೋಡ ಗ್ರಾಮದ ಸುತ್ತ ಮುತ್ತಲಿನ ಸುಮಾರು 10 ಅಂಗಡಿಗಳ ಮೇಲೆ ದಾಳಿ ನಡೆಸಲಾಯಿತು.
ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ 2003 ರ ಕಾಯ್ದೆಯ ಪ್ರಕಾರ ಅನಧಿಕೃತ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ 10 ಅಂಗಡಿಗಳ ಮೇಲೆ ದಾಳಿ ನಡೆಸಿ ಸೆಕ್ಷನ 4 ,ರಅಡಿಯಲ್ಲಿ ಒಟ್ಟೂ 2000/ರೂ ದಂಡ ವಿಧಿಸಿ ಆರೋಗ್ಯದ ಮೇಲೆ ಹಾಗುವ ದುಷ್ಪರಿಣಾಮಗಳ ಕುರಿತು ಎಚ್ಚರಿಕೆ ನೀಡಲಾಯಿತು. 200 ರೂಪಾಯಿ ಯಿಂದ 1000 ರೂಪಾಯಿ ಗೆ ದಂಡ ಹೆಚ್ಚಿಸಿರುವ ಕುರಿತು ತಿಳಿಸಲಾಯಿತು
ಈ ದಾಳಿಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಉಷಾ ಹಾಸ್ಯಗಾರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಚಿದಾನಂದ ಎಸ್, ಹಾಗು ಶಿಶು ಅಭಿವೃದ್ಧಿ ಇಲಾಖೆ , ಪೋಲಿಸ್ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ