October 5, 2025

ಹೊನ್ನಾವರ ಹಾಗೂ ಅಂಕೋಲಾ ಸಬ್ ರಿಜೆಸ್ಟರ್ ಕಛೇರಿಯ ಮೇಲೆ ಲೋಕಾಯುಕ್ತ ದಾಳಿ

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಹಾಗೂ ಅಂಕೋಲಾ ಸಬ್ ರಿಜೆಸ್ಟರ್ ಕಛೇರಿಯ ಮೇಲೆ ಲೋಕಾಯುಕ್ತ ದಾಳಿ ತಡರಾತ್ರಿಯವರೆಗೂ ದಾಖಲೆಗಳ ಪರಿಶೀಲನೆ.

ಹೊನ್ನಾವರ , ಅಂಕೋಲಾ ಉಪನೋಂದಣಾಧಿಕಾರಿ ( ಸಬ್ ರಜಿಸ್ಟರ್) ಕಚೇರಿಗೆ ಗುರುವಾರ ಕಾರವಾರದ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಡಿ.ವಾಯ್.ಎಸ್.ಪಿ.ಧನ್ಯಾ ನಾಯಕ, ಇನ್‌ಸ್ಪೆಕ್ಟರ್ ರವಿ ಅವರನ್ನೊಳಗೊಂಡ ತಂಡ ಸಂಜೆ 5 ಗಂಟೆ ಸುಮಾರಿಗೆ ಆಗಮಿಸಿದ್ದು ರಾತ್ರಿಯವರೆಗೂ ಪರಿಶೀಲನೆ ಮುಂದುವರಿದಿದೆ.

ಹೊನ್ನಾವರ ಸಬ್ ರಜಿಸ್ಟರ್ ಕಚೇರಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳು ಹರಿದಾಡುತ್ತಿದ್ದವು. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಭೇಟಿ ನೀಡಿದ್ದಾರೆಯೇ ಅಥವಾ ಸಾರ್ವಜನಿಕವಾಗಿ ಹರಿದಾಡುತ್ತಿರಯವ ದೂರಿನ ಹಿನ್ನಲೆಯಲ್ಲಿ ಆಗಮಿಸಿದ್ದಾರೆಯೇ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

About The Author

error: Content is protected !!