ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ಓಸಿ ಮಟ್ಕಾ ಜೂಗಾರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮುರ್ಡೇಶ್ವರ ಪೊಲೀಸರು ದಾಳಿ ನಡೆಸಿ ಸ್ಥಳದಲ್ಲೇ ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬAಧಿತನನ್ನು ಶಿರಾಲಿಯ ಮೊಗೇರಕೇರಿಯ ಪರಮೇಶ್ವರ ಮಾಸ್ತಿ ಮೊಗೇರ್ ಎಂದು ಗುರುತಿಸಲಾಗಿದೆ. ಈತನು ಮಾವಿನಕಟ್ಟಾದ ಬೈರುಮನೆ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಬಿಳಿ ಚೀಟಿಯಲ್ಲಿ ಅಂಕೆ ಸಂಖ್ಯೆ ಬರೆದು ಓಸಿ ಮಟ್ಕಾ ಜೂಗಾರಾಟ ನಡೆಸುತ್ತಿದ್ದಾನೆಂಬ ಖಚಿತ ಮಾಹಿತಿಯ ಮೇರೆಗೆ ಪಿಎಸೈ ಹನುಮಂತ ಬಿರಾದಾರ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತು.
ದಾಳಿಯ ವೇಳೆ ಓಸಿ ಮಟ್ಕಾ ಚೀಟಿಗಳು ಹಾಗೂ ?510 ನಗದು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ