November 19, 2025

ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಬೈಂದೂರು : ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಗ್ರಾಮ ಪಂಚಾಯತ್ ಉಪ್ಪುಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ೯ ಅಂಗನವಾಡಿ ಕೇಂದ್ರಗಳು ಸಹಯೋಗದಲ್ಲಿ ನಡೆದ ಪೋಷಣ್ ಅಭಿಯಾನ ಮತ್ತು ಸೀಮಂತ ಹಾಗೂ ಅನ್ನಪ್ರಾಶನ ಕಾರ್ಯಕ್ರಮ ಖಂಬದಕೋಣೆ ಸೇವಾ ಸಹಕಾರಿ ಸಭಾಭವನ ಉಪ್ಪುಂದ ಸಂಭ್ರಮದಲ್ಲಿ ನಡೆಯಿತು.

ಉಪ್ಪುಂದ ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಚಂದ್ರ ಖಾರ್ವಿ ಉಪ್ಪುಂದ ಕಾರ್ಯಕ್ರಮ ಉದ್ಘಾಟಿಸಿದರು. ಮಹಿಳೆಯರು ಮನೆಯಿಂದ ತಯಾರಿಸಿ ತಂದಿರುವ ಪೌಷ್ಟಿಕಾಂಶಭರಿತ ತಿಂಡಿಗಳ ಪ್ರದರ್ಶನ ನಂತರ ಆಯ್ಕೆಯಾದ ತಿನಿಸುಗಳಿಗೆ ಬಹುಮಾನ ನೀಡಲಾಯಿತು. ಗರ್ಭಿಣಿಯರಿಗೆ ಸೀಮಂತಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಮಹಾಲಕ್ಷ್ಮಿ ಗಾಣಿಗ, ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ್ ದೇವಾಡಿಗ, ಸುಶೀಲಾ ಖಾರ್ವಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಮೇಲ್ವಿಚಾರಕರಾದ ಶ್ರೀಮತಿ ರೇವತಿ, ಆರೋಗ್ಯ ಇಲಾಖೆ ಬೈಂದೂರು ಅಊಔ ಸಹನಾ,ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿ,

ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಮಕ್ಕಳ ಪೋಷಕರು ಅಂಗನವಾಡಿ ಬಾಲವಿಕಾಸ ಸಮಿತಿ ಉಪ್ಪುಂದ, ಉಪಸ್ಥಿತರಿದ್ದರು, ಸಿಂಚನ ಸ್ವಾಗತಿಸಿದರು, ಉಷಾ ನಿರೂಪಿಸಿದರು. ಸಾವಿತ್ರಿ ವಂದಿಸಿದರು.
ವರದಿ : ಎಚ್ ಸುಶಾಂತ್ ಆಚಾರ್ ಬೈಂದೂರು

About The Author

error: Content is protected !!