ಭಾವನಾ ನ್ಯೂಸ್ ಬೈಂದೂರು : ರಾಜ್ಯದ ಹೆಸರಾಂತ ಸಾಂಸ್ಕೃತಿಕ ಹಾಗೂ ಹವ್ಯಾಸಿ ನಾಟಕ ಸಂಸ್ಥೆಯಾದ ಸುರಭಿ ಬೈಂದೂರು ತನ್ನ 25ನೇ ವರ್ಷದ ರಜತಯಾನದ ಪ್ರಯುಕ್ತ ಡಿಸೆಂಬರ್ ತಿಂಗಳ 3ನೇ ವಾರದಲ್ಲಿ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ ನಡೆಯಲಿದೆ ಎಂದು ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ಹೇಳಿದರು.
ಬೈಂದೂರು ರೋಟರಿ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕರ್ನಾಟಕ ರಾಜ್ಯದ (ಕಾಸರಗೋಡು ಸಹಿತ) ಯಾವುದೇ ಪ್ರದೇಶದ ಹವ್ಯಾಸಿ ನಾಟಕ ತಂಡಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಕನಿಷ್ಠ 1 ಘಂಟೆ 30 ನಿಮಿಷ ಹಾಗೂ ಗರಿಷ್ಠ 2 ಗಂಟೆ 15 ನಿಮಿಷ ಅವಧಿಯ ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ ಅಥವಾ ಯಾವುದೇ ಪ್ರಕಾರದ ನಾಟಕ ಪ್ರದರ್ಶನ ಮಾಡಬಹುದು. ಈ ಬಾರಿ ಸ್ಪರ್ಧೆಗೆ ಗರಿಷ್ಠ 8 ತಂಡಗಳನ್ನು ಆಯ್ಕೆ ಮಾಡಲಾಗುವುದು.
ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ ಅನುಕ್ರಮವಾಗಿ ರೂ 40000, ರೂ 30,000, 20,000 ರೂ, ಬಹುಮಾನಗಳನ್ನು ಹಾಗೂ ಶಾಶ್ವತ ಫಲಕಗಳನ್ನು ನೀಡಲಾಗುವುದು. ಶ್ರೇಷ್ಠ ನಿರ್ದೇಶನ, ನಟ, ನಟ, ಸಂಗೀತ, ಬೆಳಕು ರಂಗಪರಿಕರ, ಪ್ರಸಾಧನ, ಬಾಲನಟನೆ / ಹಾಸ್ಯ ಪಾತ್ರಗಳಿಗೆ ನಗದು ಸಹಿತ ಬಹುಮಾನ ನೀಡಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಉಚಿತ ಊಟ, ವಸತಿ ಜೊತೆಗೆ ಬೈಂದೂರಿಗೆ ಬಂದು ಹೋಗುವ ಪ್ರಯಾಣದ ವೆಚ್ಚವನ್ನು ನೀಡಲಾಗುವುದು ಹಾಗೂ ಪ್ರತಿ ತಂಡಕ್ಕೆ ಗೌರವಧನವಾಗಿ ರೂ 5,000ವನ್ನು ನೀಡಲಾಗುವುದು. ಭರ್ತಿ ಮಾಡಿದ ಪ್ರವೇಶ ಪತ್ರ ಸ್ವೀಕರಿಸಲು 10 ನವೆಂಬರ್ 2025. ಕೊನೆಯ ದಿನಾಂಕವಾಗಿದ್ದು ಆಸಕ್ತ ತಂಡಗಳು ಸುರಭಿಯ ನಿರ್ದೇಶಕರಾದ ಸುಧಾಕರ ಪಿ. ಬೈಂದೂರು (8217779338) ಸಂಸ್ಥೆಯ ಮಾಜಿ ಅಧ್ಯಕ್ಷ ನಾಗರಾಜ ಪಿ. ಯಡ್ತರೆ (9343743340) ಸಾಂಸ್ಕೃತಿಕ
ಕಾರ್ಯದರ್ಶಿ ಸತ್ಯನಾ ಕೊಡೇರಿ (9110641355) 2 ಸಂಪರ್ಕಿಸಬಹುದು ಎಂದು ಸುರಭಿ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ನಿಕಟಪೂರ್ವಾಧ್ಯಕ್ಷ ನಾಗರಾಜ ಪಿ.ಯಡ್ತರೆ, ಸಾಂಸ್ಕೃತಿಕ ಸಮಿತಿ ಕಾರ್ಯದರ್ಶಿ ಸತ್ಯನಾ ಕೊಡೇರಿ, ಉಪಾಧ್ಯಕ್ಷ ಸುರೇಶ ಹುದಾರ್, ಕಾರ್ಯಕಾರಿ ಸಮಿತಿ ಸದಸ್ಯ ಗಣೇಶ ಪೂಜಾರಿ ಹಾಜರಿದ್ದರು. ಸಂಚಾಲಕರಾದ ಸುಧಾಕರ ಪಿ.ಬೈಂದೂರು ಸ್ವಾಗತಿಸಿದರು.
ವರದಿ : ಎಚ್ ಸುಶಾಂತ್ ಆಚಾರ್ ಬೈಂದೂರು

More Stories
ಮಹತೋಭಾರ ಸೇನೇಶ್ವರ ದೇವಸ್ಥಾನ ಉತ್ಸವ ಮೂರ್ತಿ ವನಭೋಜನ
ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಸಹರ್ಷರಿಗೆ ಶಾಲೆಯಲ್ಲಿ ಭವ್ಯ ಸ್ವಾಗತ
ವತ್ತಿನಕಟ್ಟೆ ಮಹಾಸತಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮ