

ಕುಮಟಾ: “ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ ಜೊತೆಗೆ ಪಾಲಕರ ಜವಬ್ದಾರಿಯೂ ಅತೀ ಮುಖ್ಯ ಪ್ರಯತ್ನ ಮತ್ತು ಶೃದ್ಧೆಯಿಂದ ಎಂತಹ ವಿದ್ಯೆಯನ್ನಾದರೂ ಕರಗತ ಮಾಡಿಕೊಳ್ಳಬಹುದು” ಎಂದು ಹಿರೇಗುತ್ತಿ ಹೈಸ್ಕೂಲ್ ಆಡಳಿತ ಮಂಡಳಿ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕ ನುಡಿದರು.
ಅವರು ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನಲ್ಲಿ ನಡೆದ ಪಾಲಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ “ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳ ಶಿಕ್ಷಣದ ಗುಣಮಟ್ಟ ಹಾಗೂ ಕಲಿಕೆಯಲ್ಲಿ ಮಕ್ಕಳ ಫಲಿತಾಂಶದ ಗುಣಮಟ್ಟ ಮತ್ತು ಭವಿಷ್ಯ ಹಾಗೂ ಪರೀಕ್ಷಾ ದೃಷ್ಟಿಯಿಂದಲೂ ತಮ್ಮ ಮಕ್ಕಳನ್ನು ಯಾವ ರೀತಿಯ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂಬುವುದರ ಉದ್ದೇಶದಿಂದ ಪಾಲಕರ ಸಭೆಯನ್ನು ಆಯೋಜಿಸಿದ್ದೇವೆ” ಎಂದರು.
ಹೈಸ್ಕೂಲ್ ಮುಖ್ಯಾಧ್ಯಾಪಕರಾದÀ ವಿಶ್ವನಾಥ ಬೇವಿನಕಟ್ಟಿ ಮಾತನಾಡಿ “ವಿದ್ಯೆಯನ್ನು ಯಾರು ಹೊಂದುತ್ತಾರೋ, ಅರ್ಥೈಸಿಕೊಳ್ಳುತ್ತಾರೋ ಅವರೇ ವಿದ್ಯಾರ್ಥಿಗಳು, ಪ್ರಯತ್ನ ಮತ್ತು ಶೃದ್ಧೆಯಿಂದ ಎಂತಹ ವಿದ್ಯೆಯನ್ನಾದರೂ ಕರಗತ ಮಾಡಿಕೊಳ್ಳಬಹುದು” ಸಮಯ ಮತ್ತು ಗುರಿ ಇವೆರಡೂ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖವಾದದ್ದು” ಎಂದರು.
ಕಾರ್ಯಕ್ರಮದ ವೇದಿಕೆಯಲ್ಲಿ ಪಾಲಕ ಪ್ರತಿನಿಧಿಗಳಾದ ಹರ್ಷಿತಾ ನಾಯಕ, ರಾಜು ಹರಿಕಂತ್ರ, ಹಿರೇಗುತ್ತಿ ಹಾಸ್ಟೆಲ್ ಸಿಬ್ಬಂದಿ ವಿದ್ಯಾ ಗೌಡ, ಶಿಕ್ಷಕರಾದ ಬಾಲಚಂದ್ರ ಹೆಗಡೆಕರ, ನಾಗರಾಜ ನಾಯಕ, ಬಾಲಚಂದ್ರ ಅಡಿಗೋಣ, ಭರತ್ ಭಟ್ಟ, ಮದನ ನಾಯಕ, ಜಾನಕಿ ಗೊಂಡ, ಶಿಲ್ಪಾ ನಾಯಕ, ಕವಿತಾ ಅಂಬಿಗ, ಮಹಿಮಾ ಗೌಡ ಉಪಸ್ಥಿತರಿದ್ದರು. ತನುಶ್ರೀ ಸಂಗಡಿಗರು ಸ್ವಾಗತಗೀತೆ ಹಾಡಿದರು. ಎನ್.ರಾಮು ಹಿರೇಗುತ್ತಿ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಮಹಾದೇವ ಗೌಡ ವಂದಿಸಿದರು. ಗೋಪಾಲಕೃಷ್ಣ ಗುನಗ ಹಾಗೂ ಗೋವಿಂದ ನಾಯ್ಕ ಸಹಕರಿಸಿದರು. ಎಲ್ಲಾ ವಿದ್ಯಾರ್ಥಿಗಳ ಪಾಲಕ ಪೋಷಕರು ಹಾಜರಿದ್ದರು.
ವರದಿ:ಎನ್ ರಾಮು ಹಿರೇಗುತ್ತಿ
More Stories
‘ಅಯ್ಯಪ್ಪಸ್ವಾಮಿ ರೂಪದ ಗಣಪ’ ಹಾಗೂ ‘ಆಪರೇಷನ್ ಸಿಂಧೂರ್ ಥೀಮ್’
ಮುಟ್ಟಳಿ ಮೂಡಭಟ್ಕಳ ಸಾರ್ವಜನಿಕ ಶೀ ಗಣೇಶೋತ್ಸವ ಸಮಿತಿಯಿಂದ ವೆಂಕಟರಮಣ ನಾಯ್ಕರಿಗೆ ಸನ್ಮಾನ
ಕಾಳಜಿ ಕೇಂದ್ರಕ್ಕೆ ಬೇಟಿ ನೀಡಿದ ಕಾಂಗ್ರೇಸ್ ಮುಖಂಡರಾದ ಮಂಜುನಾಥ ನಾಯ್ಕ