November 18, 2025

ಬಸ್ ನಿಲ್ದಾಣದಲ್ಲೇ ಚಾಲಕನಿಗೆ ಹೃದಯಾಘಾತ; ಸ್ಥಳದಲ್ಲೇ ಸಾವು

ಭಟ್ಕಳ: ತಾಲೂಕಿನ ಮಣ್ಕುಳಿ ಗ್ರಾಮದ ಮೂಲದ ಎ.ಪಿ.ಎಮ್. ಬಸ್ ಚಾಲಕನೊಬ್ಬ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ದುರ್ಘಟನೆ ಭಟ್ಕಳದಲ್ಲಿ ನಡೆದಿದೆ.

ಮೃತರನ್ನು ಚಂದ್ರಶೇಖರ ಸುಬ್ಬಣ್ಣ ಪೂಜಾರಿ (64) ಎಂದು ಗುರುತಿಸಲಾಗಿದೆ. ಇವರು ಒಂದು ವರ್ಷದ ಹಿಂದೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು, ಬಳಿಕ ಮತ್ತೆ ಆರೋಗ್ಯವಾಗಿದ್ದು, ನಿರಂತರವಾಗಿ ಎ.ಪಿ.ಎಮ್. ಬಸ್ಸಿನಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದರು.
ಸೋಮವಾರ ಬೆಳಿಗ್ಗೆ ಸುಮಾರು 5 ಗಂಟೆಗೆ ಮನೆಯಿಂದ ಹೊರಟ ಚಂದ್ರಶೇಖರ, ಪೆಟ್ರೋಲ್ ಬಂಕ್ ಹತ್ತಿರ ನಿಲ್ಲಿಸಿದ್ದ ಬಸ್ಸನ್ನು ಚಲಾಯಿಸಿಕೊಂಡು ಬಂದು ಭಟ್ಕಳ ಬಸ್ ನಿಲ್ದಾಣದ ಎದುರಿನ ಖಾಸಗಿ ಬಸ್ ನಿಲುಗಡೆ ಸ್ಥಳದಲ್ಲಿ ಬಸ್ಸನ್ನು ನಿಲ್ಲಿಸಿದರು. ಪ್ರಯಾಣಿಕರಿಗೆ ಕಾಯುತ್ತಾ ನಿಂತಿದ್ದ ವೇಳೆ ಏಕಾಏಕಿ ಹೃದಯಾಘಾತ ಬಂದು ನೆಲಕ್ಕುಸಿದು ಬಿದ್ದು ತಕ್ಷಣವೇ ಮೃತ ಪಟ್ಟಿದ್ದಾರೆ.
ಈ ಬಗ್ಗೆ ಮೃತರ ಪುತ್ರ ಯತೀಶ ಪೂಜಾರಿ ಭಟ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ.

About The Author

error: Content is protected !!