November 19, 2025

ತಾಲೂಕ ಆಡಳಿತ ಸೌದಕ್ಕೆ ಶಾಸಕ ದಿನಕರ ಶೆಟ್ಟಿ ಭೇಟಿ

ಹೊನ್ನಾವರ; ತಾಲೂಕಿನ ಆಡಳಿತಸೌದಕ್ಕೆ ಸೋಮವಾರ ಶಾಸಕ ದಿನಕರ ಶೆಟ್ಟಿ ದಿಡೀರ್ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಕಂದಾಯ ಇಲಾಖೆಯ ಕಾರ್ಯ ನಿಮಿತ್ತ ಆಗಮಿಸಿದ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಿ ತ್ವರಿತವಾಗಿ ಸೇವೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಆಡಳಿತಸೌದದ ಸಭಾಂಗಣದಲ್ಲಿ ತಾಲೂಕಿನ ವಿವಿಧ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದರು. ಹೆಸ್ಕಾಂ ಇಲಾಖೆಯ ಅಧಿಕಾರಿಗಳ ಜೊತೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯದ ಕುರಿತು ಚರ್ಚೆಯ ವೇಳೆ ಸಾಲ್ಕೋಡ್ ಹೊಸಾಕುಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ರಾತ್ರಿ ವೇಳೆ ವಿದ್ಯುತ್ ಕಡಿತ ಮಾಡುವುದನ್ನು ಪ್ರಶ್ನಿಸಿದರು. ಕೂಡಲೇ ಸಮಸ್ಯೆ ಬಗೆಹರಿಸಬೇಕು. ನೆಟವರ್ಕ್ ವಂಚಿತ ಪ್ರದೇಶವಾದ ಕೆರೆಕೋಣ, ಕಾನಕ್ಕಿ, ದರ್ಬೆಜಡ್ಡಿ, ತೊಳಸಾಣಿ ಭಾಗದಲ್ಲಿ ಸಮಸ್ಯೆ ಉಂಟಾಗಲಿದೆ. ಈ ಬಗ್ಗೆ ಇಂದೆ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು. ಸಮರ್ಪಕ ವಿದ್ಯುತ್ ಪೂರೈಕೆ ಮಾಡುವ ಮೂಲಕ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗದAತೆ ನೋಡಿಕೊಳ್ಳಿ. ಸಾರ್ವಜನಿಕರು ಸರ್ಕಾರಿ ಕಛೇರಿಗೆ ಆಗಮಿಸಿದಾಗ ಗೌರವದಿಂದ ನಡೆದುಕೊಳ್ಳಿ. ಅವರಿಗೆ ತ್ವರಿತ ಸೇವೆ ನೀಡುವ ಜೊತೆ ಸಕಾಲದಲ್ಲಿ ಸರ್ಕಾರದ ಸೌಲಭ್ಯ ಸಿಗುವಂತೆ ನೋಡಿಕೊಳ್ಳುವುದು ಸರ್ಕಾರಿ ಅಧಿಕಾರಿಗಳ ಪ್ರಥಮ ಜವಬ್ದಾರಿಯಾಗಿದೆ ಎಂದರು.


ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾವಾರು ಮಾಹಿತಿ ನೀಡಿದರು. ಪ.ಪಂ.ಅಧ್ಯಕ್ಷ ವಿಜಯ ಕಾಮತ, ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ ಮೇಸ್ತ, ಬಿಜೆಪಿ ಹೊನ್ನಾವರ ಮಂಡಲಾಧ್ಯಕ್ಷ ಯೊಗೀಶ ಮೇಸ್ತ, ಸಾಲ್ಕೋಡ್ ಗ್ರಾ.ಪಂ. ಉಪಾಧ್ಯಕ್ಷ ಬಾಲಚಂದ್ರ ನಾಯ್ಕ, ಬಿಜೆಪಿ ಮುಖಂಡರಾದ ಎಂ.ಎಸ್.ಹೆಗಡೆ ಕಣ್ಣಿ ಮತ್ತಿತರು ಉಪಸ್ಥಿತರಿದ್ದರು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

About The Author

error: Content is protected !!