August 30, 2025

ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಒಕ್ಕೂಟ

ಹೊನ್ನಾವರ: ವಿದ್ಯಾರ್ಥಿಗಳು ಸಮಾಜದ ಎಲ್ಲಾ ಮಜಲಿನಲ್ಲಿ ಕಾಣಿಸಿಕೊಂಡು, ಆಸಕ್ತಿ ಇರುವ ವಿಷಯವನ್ನು ಆಯ್ಕೆ ಮಾಡಿಕೊಂಡು ಮುನ್ನಡೆಯಬೇಕು ಎಂದು ಎಂ.ಪಿ.ಇ ಸೊಸೈಟಿ ಅಧ್ಯಕ್ಷ ಕೃಷ್ಣಮೂರ್ತಿ ಭಟ್ ಶಿವಾನಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಒಕ್ಕೂಟ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟಿಸಿ ಮಾತನಾಡಿದರು. ಪೂರ್ವ ವಿದ್ಯಾರ್ಥಿಗಳು ನಮ್ಮ ಸಂಸ್ಥೆಯ ಜೀವಾಳವಾಗಿದೆ. ಇಂದಿನ ಮಕ್ಕಳು ಮೊಬೈಲ್ ಗೀಳು ಬಿಟ್ಟು ಇತರೊಂದಿಗೆ ಬೆರೆತು ಸಮಾಜಮುಖಿ ಕಾರ್ಯದಲ್ಲಿ ತೊಡಗುವಂತೆ ಕರೆ ನೀಡಿದರು. ಯಾವುದೇ ರಂಗಕ್ಕೆ ಹೋಗಬೇಕಾದರೂ ಶಿಕ್ಷಣವಿದ್ದರೆ ಮಾತ್ರ ಸಹಕಾರಿಯಾಗಿದೆ. ಶಿಕ್ಷಣವನ್ನು ಪಡೆದರೆ ನಿಮಗೆ ಅದೃಷ್ಟ ಹುಡುಕಿಕೊಂಡು ಬರಲಿದೆ. ಸವಾಲುಗಳಿಗೆ ಎದೆಕೊಟ್ಟು ಎದುರಿಸುವ ಗುಣವನ್ನು ಬೆಳೆಸಿಕೊಳ್ಳಿ ಎಂದರು.

 ಉದ್ದಿಮೆದಾರರು ಕಾಲೇಜಿನ ಪೂರ್ವ ವಿದ್ಯಾರ್ಥಿ ಪ್ರಕಾಶ ಕಾಮತ್ ಮಾತನಾಡಿ ಪದವಿ ಪಡೆಯುವುದು ಕೇವಲ ಸರ್ಟಿಪಿಕೆಟ್ ಪಡೆಯುವುದಕ್ಕೆ ಸಿಮೀತವಾಗಬಾರದು. ಶಿಕ್ಷಣದ ಜೊತೆ ಕ್ರೀಡೆ, ಸಾಂಸ್ಕ್ರತಿಕವಾಗಿಯೂ ಸಾಧನೆ ಮಾಡಬಹುದಾಗಿದೆ ಎಂದರು.

ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಂ.ಎಚ್.ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸಕ ನಿಜಲಿಂಗಪ್ಪ ಎಚ್ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋದಿಸಿದರು. ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಚಾರ್ಯ ಡಿ.ಎಲ್.ಹೆಬ್ಬಾರ, ಸಂಸ್ಥೆಯ ಕಾರ್ಯದರ್ಶಿ ಎಸ್.ಎಂ.ಭಟ್, ವಿದ್ಯಾರ್ಥಿ ಒಕ್ಕೂಟದ ಸಲಹೆಗಾರ ಐ ಎ ಶೇಖ್, ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರೀನ್ಸ್ ಅಂತೋನ್ ರೊಡ್ರಗೀಸ್, ಕ್ರೀಡಾ ಕಾರ್ಯದರ್ಶಿ ಕಿಶನ್ ಎಸ್. ನಾಯ್ಕ ಇದ್ದರು. ಕಾಲೇಜು ವಿದ್ಯಾರ್ಥಿನಿಯರಾದ ಕಾಂತಿ ಹೆಗಡೆ ಪ್ರಜ್ಞಾ ಗೌಡ ಕಾರ್ಯಕ್ರಮ ನಿರ್ವಹಿಸಿದರು.

ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

About The Author