
ಹೊನ್ನಾವರ : ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ದಿನಾಂಕ25-10-2025ರAದು ಕುಮಟಾದ ಸರಕಾರಿ ಉರ್ದು ಪ್ರೌಢಶಾಲೆಯಲ್ಲಿ ಡಯಟ್ ಪ್ರಾಯೋಜಕತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಪಾತ್ರಾಭಿನಯ ಸ್ಪರ್ದೆಯಲ್ಲಿ ಸರಕಾರಿ ಪ್ರೌಢಶಾಲೆ ಇಡಗುಂಜಿ ತಾ|| ಹೊನ್ನಾವರ ಇಲ್ಲಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರು ಹಾಗೂ ಉಪನ್ಯಾಸಕರ ಸಮರ್ಥ ಮಾರ್ಗದರ್ಶನದಲ್ಲಿ ಶಾಲೆಯ ಶಿಕ್ಷಕರಾದ ಆನಂದ ನಾಯ್ಕ ಅವರ ರಚನೆ ಮತ್ತು ನಿರ್ದೇಶನದಲ್ಲಿ ಶಾಲೆಯ ಉಪಪ್ರಾಚಾರ್ಯರಾದ ಶ್ರೀಮತಿ ಆಶಾ ವಿ ಪೈ ಹಾಗೂ ಎಲ್ಲ ಶಿಕ್ಷಕರ ಸಹಕಾರದೊಂದಿಗೆ ವಿದ್ಯಾರ್ಥಿಗಳಾದ ಗಣೇಶ ಮಂಜುನಾಥ ನಾಯ್ಕ, ಧನ್ಯ ಕಲಾಧರ ಅಂಬಿಗ, ಚಂದ್ರಕಾAತ ಬಾಬು ಮರಾಠಿ, ಜಯಂತಿ ನಾರಾಯಣ ಮರಾಠಿ ಮತ್ತು ಪ್ರಜ್ವಲ ಶಿವಾನಂದ ನಾಯ್ಕ ಅವರ ಮನೋಜ್ಞ್ ಅಭಿನಯದ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ರಾಜ್ಯಮಟ್ಟದಲ್ಲಿ ವಿದ್ಯಾರ್ಥಿಗಳು ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ..


ವಿದ್ಯಾರ್ಥಿಗಳ ಈ ಅಮೋಘ ಸಾಧನೆಯನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ಲತಾ ನಾಯ್ಕ ಉಪನಿರ್ದೇಶಕರು(ಅಭಿವೃದ್ದಿ) ಹಾಗೂ ಡಯಟ್ ಪ್ರಾಂಶುಪಾಲರಾದ ಶ್ರೀಎನ್ ಆರ್ ನಾಯ್ಕ ಉಪಪ್ರಾಚಾರ್ಯರಾದ ಶ್ರೀಜಿ.ಎಸ್.ಭಟ್,ಡಯಟ್ನ ಎಲ್ಲಾ ಹಿರಿಯ ಮತ್ತು ಕಿರಿಯ ಉಪನ್ಯಾಸಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವಿನಾಯಕ ಅವಧಾನಿ ರವರು ಮುಕ್ತಕಂಠದಿAದ ಶ್ಲಾಘಿಸಿದ್ದಾರೆ. ಹಾಗೆ ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀರಮೇಶ ಶಾನಭಾಗ್ಹಾಗೂ ಸರ್ವಸದಸ್ಯರು ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.






More Stories
ಶಿಕ್ಷಣ ಇಲಾಖೆ ತಂಡ ಚಾಂಪಿಯನ್
ಕಣ್ಣಿನ ಉಚಿತ ತಪಾಸಣಾ ಕಾರ್ಯಕ್ರಮ
ಕೆರೆಕೋಣದಲ್ಲಿ “ಪೂರ್ಣಚಂದ್ರ ತೇಜಸ್ವಿ – ಒಂದು ಮೆಲುಕು”