November 19, 2025

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಯುವಕ ಬಂಧನ

ಭಟ್ಕಳ: ನಗರದ ಸಂತೆ ಮಾರ್ಕೆಟ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ವ್ಯಕ್ತಿಯನ್ನು ಭಟ್ಕಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ಹನೀಫಾಬಾದ್ ನಿವಾಸಿ ಸೈಯ್ಯದ ಮೂಸಾ (ತಂದೆ ಸೈಯ್ಯದ ಅಹ್ಮದ) ಎಂದು ಗುರುತಿಸಲಾಗಿದೆ. ಸಂತೆ ಮಾರ್ಕೆಟ್ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಈತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಗಾಂಜಾ ಸೇವಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

ನAತರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಸಂಬAಧ ಸರ್ಕಾರದ ಪರವಾಗಿ ಪಿಎಸ್‌ಐ ತಿಮ್ಮಪ್ಪ ಎಸ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

About The Author

error: Content is protected !!