November 19, 2025

ರೂರಲ್ ಐಟಿ ಕ್ವಿಜ್ ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

ಹೊನ್ನಾವರ: ತಾಲೂಕಿನ ಅರೇಅಂಗಡಿಯ ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳಾದ ಶ್ರೀಧರ ಶ್ರೀಪಾದ ಭಟ್ಟ್ ಹಾಗೂ ಮೇಧಾ ಶಂಭು ಭಟ್ ಇವರು ರೂರಲ್ ಐಟಿ ಕ್ವಿಜ್ ನ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿಯ ಅಧ್ಯಕ್ಷರು ಸದಸ್ಯರು ,ಶೈಕ್ಷಣಿಕ ಮಾರ್ಗದರ್ಶಕರು, ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

About The Author

error: Content is protected !!