November 19, 2025

ಬೈಂದೂರು – ಬೆಂಗಳೂರು ನಡುವೆ ಕೆಎಸ್ಸಾರ್ಟಿಸಿ ಸೇವೆ ಮರು ಆರಂಭ

ಭಾವನಾ ಸುದ್ದಿ ಬೈಂದೂರು : ಕುಂದಾಪುರದಿAದ ಕೊಲ್ಲೂರು ಮಾರ್ಗವಾಗಿ ಬೆಂಗಳೂರಿಗೆ ಪ್ರತಿದಿನ ಸಂಚರಿಸುತ್ತ ಮಧ್ಯಮ ವರ್ಗದ ಜನರಿಗೆ ಸಹಕಾರಿಯಾಗಿದ್ದ ಸರಕಾರಿ ಬಸ್ ಕರೋನಾ ಮಹಾಮಾರಿಯ ಸಮಯದಲ್ಲಿ ತನ್ನ ಸೇವೆಯನ್ನು ನಿಲ್ಲಿಸಿತ್ತು. ಬಳಿಕ ಬೈಂದೂರಿನ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿದ ಮಾಜಿ ಶಾಸಕರು ಮತ್ತು ಗ್ಯಾರಂಟಿ ಸಮಿತಿ ಅಧ್ಯಕ್ಷರ ಸಹಕಾರದೊಂದಿಗೆ ಬಸ್ ಸೇವೆಯನ್ನು ಮರು ಆರಂಭಿಸಿದ್ದು ಬೈಂದೂರಿನ ನಾಗರೀಕರು ಬೈಂದೂರು ಸರ್ಕಲ್ ನಲ್ಲಿ ಬಸ್‌ಗೆ ಸ್ವಾಗತಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಬೈAದೂರು ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ ಉಪ್ಪುಂದ ಅವರು ಮಾತನಾಡಿ, ಸಾರ್ವಜನಿಕರು ಅನಗತ್ಯವಾಗಿ ಖಾಸಗಿ ವಾಹನ ಬಳಸದೆ ಪ್ರತಿನಿತ್ಯದ ಪ್ರಯಾಣಕ್ಕಾಗಿ ರಸ್ತೆ ಸಾರಿಗೆ ಬಸ್‌ಗಳನ್ನು ಬಳಸಬೇಕು. ಇದರಿಂದ ಪರಿಸರ ಮಾಲಿನ್ಯ ತಡೆಗಟ್ಟುವುದರ ಜೊತೆಗೆ ವೈಯಕ್ತಿಕ ವೆಚ್ಚವನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಬೈಂದೂರು ಪಟ್ಟಣ ಪಂಚಾಯತ್ ನಾಮ ನಿರ್ದೇಶಕ ಸದಾಶಿವ ಡಿ ಪಡುವರಿ, ಗ್ಯಾರಂಟಿ ಸಮಿತಿ ಸದಸ್ಯರಾದ ಬಾಬು ದೇವಾಡಿಗ, ಮಾಲತಿ ಶಿವಾನಂದ, ಸೂರ್ಯಕಾಂತಿ ಪಡುವರಿ, ಬೈಂದೂರು ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ವೀರಭದ್ರ ಗಾಣಿಗ, ಕಾಂಗ್ರೆಸ್ ಕಿಸಾನ್ ಘಟಕದ ಉಪಾಧ್ಯಕ್ಷ ಲಕ್ಷ್ಮಣ ಯೋಜನಾನಗರ, ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು, ಹಾಗೂ ಕಾರ್ಯಕರ್ತರು ಇದ್ದರು.

ವರದಿ : ಎಚ್ ಸುಶಾಂತ್ ಆಚಾರ್ ಬೈಂದೂರು

About The Author

error: Content is protected !!