November 19, 2025

ಭಟ್ಕಳ ಪುರಸಭೆಯ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಉಪವಿಭಾಗಾಧಿಕಾರಿ ಕಾವ್ಯರಾಣಿ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಏಳು ಪ್ರಮುಖ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ಆಯ್ಕೆಯಾದ ಸದಸ್ಯರ ಅಧಿಕಾರಾವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರವು ಆಡಳಿತಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ. ಈ ಸಂಬAಧ ಹೊರಡಿಸಿರುವ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ತಂದಿರುವುದಾಗಿ ರಾಜ್ಯಪತ್ರದಲ್ಲಿ ತಿಳಿಸಲಾಗಿದೆ.

ಭಟ್ಕಳ ಪುರಸಭೆಯ ಪ್ರಜಾಪ್ರತಿನಿಧಿ ಮಂಡಳಿಯ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಕಾವ್ಯರಾಣಿ ಅವರು ಪುರಸಭೆಯ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ 389ರಡಿ ಸರ್ಕಾರಕ್ಕೆ ದೊರಕಿರುವ ಅಧಿಕಾರವನ್ನು ಉಪಯೋಗಿಸಿ ಈ ನಿಯುಕ್ತಿ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಹೊಸ ಚುನಾಯಿತ ಮಂಡಳಿ ಅಸ್ತಿತ್ವಕ್ಕೆ ಬರುವವರೆಗೆ ಪುರಸಭೆಯ ದಿನನಿತ್ಯದ ಆಡಳಿತ ಕಾರ್ಯಗಳನ್ನು ಆಡಳಿತಾಧಿಕಾರಿ ನೋಡಿಕೊಳ್ಳಲಿದ್ದಾರೆ. ಅಧಿಕಾರ ವಹಿಕೆ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ, ಆರೋಗ್ಯ ಅಧಿಕಾರಿ ಸೋಜಿಯಾ ಸೊಮನ್ ಸೇರಿದಂತೆ ವಿಭಾಗದ ಹಲವು ಅಧಿಕಾರಿಗಳು ಹಾಜರಿದ್ದರು

About The Author

error: Content is protected !!