November 18, 2025

ಮುರುಡೇಶ್ವರ ಸಮುದ್ರದಲ್ಲಿ ಅಲೆಗಳಿಗೆ ಸಿಲುಕಿ ಪ್ರವಾಸಿಗ ಸಾವು

ಭಟ್ಕಳ: ಮುರುಡೇಶ್ವರ ಸಮುದ್ರ ತೀರದಲ್ಲಿ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿ ಅಲೆಗಳ ಹೊಡೆತಕ್ಕೆ ತುತ್ತಾಗಿ ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಮೃತನನ್ನು ಶಿವಮೊಗ್ಗ ಜಿಲ್ಲೆಯ ಹೋಟೆಲ್ ಮಾರಿಕಾಂಬ ಹತ್ತಿರ ವಾಸವಾಗಿದ್ದ ಶುಭಾಸ್ ದೇವೇಂದ್ರಪ್ಪ (45) ಎಂದು ಗುರುತಿಸಲಾಗಿದೆ, ಪೊಲೀಸರು ಮಾಹಿತಿಯ ಪ್ರಕಾರ, ಮೃತನು ಗುರುವಾರ ಸಂಜೆ ಸ್ನೇಹಿತನೊಂದಿಗೆ ಶಿವಮೊಗ್ಗದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಆಗಮಿಸಿದ್ದ. ಶುಕ್ರವಾರ ಮಧ್ಯಾಹ್ನ ಸಮುದ್ರ ಸ್ನಾನಕ್ಕೆ ಇಳಿದ ವೇಳೆ ಅಚಾನಕ್ ಬಲವಾದ ಅಲೆಗಳು ಎಳೆದೊಯ್ದಿದ್ದು ನೀರಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ.
ಘಟನೆಯ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

About The Author

error: Content is protected !!