ಶಿರಸಿ: ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ಶಿಕ್ಷಕ, ಇಲ್ಲಿನ ಡಯಟ್ ತರಬೇತಿ ಸಂಸ್ಥೆಯ ಉಪನ್ಯಾಸಕ ನಾರಾಯಣ ಪಿ.ಭಾಗ್ವತ ಅವರಿಗೆ ಉಡುಪಿಯ ಕನ್ನಡ ಭಾಷಾ ಶಿಕ್ಷಕರ ಸಂಘ ನೀಡುವ ಕನ್ನಡ ಜ್ಞಾನ ನೇಸರ ಪ್ರಶಸ್ತಿ ಪ್ರಕಟಿಸಲಾಗಿದೆ.
ಉಡುಪಿಯ ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ನ.30ರಂದು ನಡೆಸಲಾಗುವ ಸಮಾರಂಭದಲ್ಲಿ ನಾರಾಯಣಗುರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಂಜುನಾಥ ಭಂಡಾರಿ, ಸಂಘದ ಅಧ್ಯಕ್ಷ ಆನಂದ ಸಾಲಿಗ್ರಾಮ ಸೇರಿದಂತೆ ಅನೇಕರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಮೂಲತಃ ಕುಮಟಾ ತಾಲ್ಲೂಕು ಹಂದಿಗೋಣ ಗ್ರಾಮದ ನಾರಾಯಣ ಭಾಗ್ವತ ಪ್ರಸ್ತುತ ಶಿರಸಿ ನಿವಾಸಿಯಾಗಿದ್ದು, ಮಾರಿಕಾಂಬಾ ಪ್ರೌಢಶಾಲೆಯಲ್ಲಿದ್ದಾಗ ಎರಡು ವರ್ಷದ ಹಿಂದೆ ರಾಷ್ಟ್ರ ಪ್ರಶಸ್ತಿ ಬಂದಿತ್ತು ಎಂಬುದು ಉಲ್ಲೇಖನೀಯ.
About The Author


More Stories
ಕಸ್ತೂರಿ ರಂಗನ್ ವರದಿ: ಸೂಕ್ಷ್ಮ ಪ್ರದೇಶ ಅಧ್ಯಯನಕ್ಕೆ ಸಮಿತಿ ರಚನೆ ಹಾಗೂ ಜನವಸತಿ ಪ್ರದೇಶ ಮುಕ್ತಗೊಳಿಸಲು ರವೀಂದ್ರ ನಾಯ್ಕ ಆಗ್ರಹ
ಶಿರಸಿಯಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ರ್ಯಾಲಿ: ವರದಿ ತಿರಸ್ಕರಿಸಲು ಹಕ್ಕು ಒತ್ತಾಯ
ನದಿ ತಿರುವು ಯೋಜನಾ ವಿರೋಧಿ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ: ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ