December 23, 2025

ತಾಲೂಕ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಸತ್ಯಸಾಯಿ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

ಹೊನ್ನಾವರ: ದಿನಾಂಕ 04-11-2025 ಗುರುವಾರದಂದು ನಡೆದಂತಹ ತಾಲೂಕ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಸತ್ಯಸಾಯಿ ಕರಿಕಾನ ಪರಮೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಬಿ. ಜಿ. ಚಂದನ್ ಕ್ಲೇ ಮಾಡಲಿಂಗ್ ನಲ್ಲಿ ಪ್ರಥಮ ಸ್ಥಾನ, ಪ್ರೌಢಶಾಲಾ ವಿಭಾಗದಲ್ಲಿ ಪ್ರಜ್ಞಾ ಎಸ್ ಹೆಗಡೆ ಭಾವಗೀತೆಯಲ್ಲಿ ಪ್ರಥಮ ಸ್ಥಾನ, ಕೃಪಾ ಎಂ ನಾಯ್ಕ್ ಜನಪದ ಗೀತೆಯಲ್ಲಿ ಪ್ರಥಮ ಸ್ಥಾನ, ಶ್ರೀನಿಧಿ ಹೆಗಡೆ ಇಂಗ್ಲಿಷ್ ಭಾಷಣದಲ್ಲಿ ದ್ವಿತೀಯ ಸ್ಥಾನ, ಮೌಲ್ಯ ಎಸ್ ನಾಯ್ಕ್ ಪ್ರಬಂಧದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ . ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಸಾಧನೆ ಮಾಡಿದಂತಹ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರು ಸದಸ್ಯರು ಸರ್ವ ಪದಾಧಿಕಾರಿಗಳು ಶೈಕ್ಷಣಿಕ ಸಲಹೆಗಾರರು ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

About The Author

error: Content is protected !!