
ಹೊನ್ನಾವರ : ಕಳೆದೊಂದು ವರ್ಷದಿಂದ ಹೊನ್ನಾವರ ಬ್ಲಾಕ್ ಕಾಂಗ್ರೆಸ್‌ನಲ್ಲಿ ಯಾವುದೇ ಕಾರ್ಯಚಟುವಟಿಕೆಗಳು ನಡೆಯದೇ ಸಂಪೂರ್ಣ ನಿಷ್ಕಿçÃಯಗೊಂಡಿರುವುದನ್ನು ಖಂಡಿಸಿ ಹೊನ್ನಾವರ ಬ್ಲಾಕ್ ಉಪಾಧ್ಯಕ್ಷ ಸ್ಥಾನಕ್ಕೆ ಕೇಶವ ಲಕ್ಷö್ಮಣ ಮೇಸ್ತ ರಾಜೀನಾಮೆ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುತ್ತಾರೆ.
ನಿಷ್ಕಿçÃಯ ಬ್ಲಾಕ್‌ಕಾಂಗ್ರೆಸ್ ಸಮಿತಿಯಲ್ಲಿದ್ದು ಯಾವುದೇ ಪ್ರಯೋಜನವಿಲ್ಲದಿರುವ ಕಾರಣ ನನ್ನ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಪತ್ರಿಕಾ ಹೇಳಿಕೆಯ ಮೂಲಕ ಕೇಶವ ಮೇಸ್ತ ತಮ್ಮ ಸ್ಪಷ್ಟ ನಿಲುವನ್ನು ಪ್ರಕಟಿಸಿದ್ದಾರೆ.
ಕೇಶವ ಮೇಸ್ತ ಮೀನುಗಾರ ಮುಖಂಡರಾಗಿದ್ದು ಅನೇಕ ಜನಪರ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿ ಜನಪ್ರಿಯರಾಗಿದ್ದಾರೆ. ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದೂ ಮಾಜಿ ಶಾಸಕ ಮೋಹನ ಶೆಟ್ಟಿ ಮತ್ತು ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಹೊನ್ನಾವರ ನಗರ ಘಟಕದ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಇಂಟಕ್ ವಿಭಾಗದ ಉಪಾಧ್ಯಕ್ಷರಾಗಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಮಂಚೂಣಿ ನಾಯಕರ ಸಂಪರ್ಕದಲ್ಲಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಶಿಕ್ಷಣ ಇಲಾಖೆ ತಂಡ ಚಾಂಪಿಯನ್
ಕಣ್ಣಿನ ಉಚಿತ ತಪಾಸಣಾ ಕಾರ್ಯಕ್ರಮ
ಕೆರೆಕೋಣದಲ್ಲಿ “ಪೂರ್ಣಚಂದ್ರ ತೇಜಸ್ವಿ – ಒಂದು ಮೆಲುಕು”