August 30, 2025

ಕಡ್ಡಾಯವಾಗಿ ದಾಖಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು – ಶಾಸಕ ಹೆಚ್.ಟಿ.ಮಂಜು

ಕೃಷ್ಣರಾಜಪೇಟೆ : ತಾಲೂಕಿನ ಮಡುವಿನಕೋಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಗ್ರಾಮದ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ನೆರೆದಿದ್ದ ಸಾರ್ವಜನಿಕರು ಹಾಗೂ ಗ್ರಾಮಸ್ಥರನ್ನು ಉದ್ದೇಶಿಸಿ ಶಾಸಕ ಹೆಚ್.ಟಿ.ಮಂಜು ಮಾತನಾಡಿದರು.

ಗ್ರಾಮೀಣ ಪ್ರದೇಶದ ಜನರು ಕಾನ್ವೆಂಟ್ ಗಳ ವ್ಯಾಮೋಹ ಹಾಗೂ ಆಂಗ್ಲ ಮಾಧ್ಯಮದ ಪ್ರೇಮದಿಂದ ಹೊರಬಂದು ಪ್ರಾಥಮಿಕ ಶಿಕ್ಷಣವನ್ನು ನಿಮ್ಮ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲೇ ಕೊಡಿಸಲು ಮುಂದಾಗಬೇಕು ಹಾಗೂ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ದಾಖಲು ಮಾಡುವುದರ ಮೂಲಕ, ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವುದನ್ನು ತಪ್ಪಿಸಿ, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು ಎಂದು ಮನವಿ ಮಾಡಿದ ಶಾಸಕರು, 20 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ನಡೆಯುತ್ತಿದೆ ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಗುತ್ತಿಗೆದಾರರಿಗೆ ನೋಡಿಕೊಂಡು ಒಳ್ಳೆ ಕೆಲಸವನ್ನು ನಿಮ್ಮ ಗ್ರಾಮಕ್ಕೆ ಮಾಡಿಸಿಕೊಳ್ಳಿ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಕೃಷ್ಣರಾಜಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ವಿದ್ಯಾವತಿ, ಸಿಡಿಪಿಓ ಕಚೇರಿಯ ಮೇಲ್ವಿಚಾರಕ್ಕೆ ಶಾಂತವ್ವ, ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆನಂದ್, ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕ ಚಂದ್ರಶೇಖರ್, ಮಡುವಿನ ಕೋಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಭಿನಯ ಮುಖಂಡರಾದ ಕಾಂತರಾಜು ಕಿರಣ್ ಗೌಡ ಗಂಗಾಧರ ಮೋಹನ್ ಗೌಡ, ರಮೇಶ್, ಸಚಿನ್, ಸತೀಶ್, ಸಾಗರ್ ಡಿ ದೇವರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಸೇರಿದಂತೆ ಮಡುವಿನ ಕೋಡಿ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು . ಮಡುವಿನ ಕೋಡಿ ಗ್ರಾಮಕ್ಕೆ ಆಗಮಿಸಿದ ಶಾಸಕ ಮಂಜು ಅವರಿಗೆ ಮುತ್ತೈದೆಯರು ಪೂರ್ಣಕುಂಭ ಸ್ವಾಗತ ನೀಡಿ ತಮ್ಮ ಗ್ರಾಮಕ್ಕೆ ಬರಮಾಡಿಕೊಂಡರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

About The Author