December 23, 2025

ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಕಣ್ಣಿನ ಶಸ್ತ್ರಚಿಕಿತ್ಸೆ ಶಿಬಿರ

ಹೊನ್ನಾವರ: ಲಯನ್ಸ್ ಕ್ಲಬ್ ಹೊನ್ನಾವರ, ಕಲಭಾಗಕರ್ ಕಲ್ಯಾಣಕಲ್ಪ ಟ್ರಸ್ಟ್ ಮುಂಬೈ, ರೇವಣಕರ್ ಚಾರಿಟೇಬಲ್ ಕಣ್ಣಿನ ಆಸ್ಪತ್ರೆ ಬಗ್ಗೋಣ, ಶ್ರೀದೇವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹೊನ್ನಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರ ನಗರದ ಶ್ರೀದೇವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಕಣ್ಣಿನ ಶಸ್ತ್ರಚಿಕಿತ್ಸೆ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಡಾ. ಮನೋಜ್ ಎಂ. ಎನ್. ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿ, ಕಣ್ಣುಗಳ ದೃಷ್ಟಿಯು ಸಮರ್ಪಕವಾಗಿ ಇದ್ದರೆ ಕುಳಿತ ಸ್ಥಳದಿಂದಲೇ ಜಗತ್ತನ್ನು ವೀಕ್ಷಿಸುವ ಶಕ್ತಿ ಪ್ರತಿಯೊಬ್ಬರಲ್ಲಿದೆ. ಕಣ್ಣಿನ ದೃಷ್ಟಿ ಎಲ್ಲರಿಗೂ ಮಹತ್ವದ್ದಾಗಿದ್ದು ಅದರಲ್ಲೂ ವಿಶೇಷವಾಗಿ ವಯೋವೃದ್ಧರೇ ಹೆಚ್ಚಿನ ಸಂಖ್ಯೆಯಲ್ಲಿ ಕಣ್ಣಿನ ಪೊರೆಗೆ ತುತ್ತಾಗುತ್ತಿದ್ದಾರೆ. ವಯೋವೃದ್ಧರ ನಿತ್ಯ ಜೀವನದ ಕೆಲಸಕಾರ್ಯಗಳನ್ನು ಅವರೇ ನಿರ್ವಹಿಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಲಿದೆ ಎಂದರು.

ವೇದಿಕೆಯಲ್ಲಿ ಶ್ರೀದೇವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಚಂದ್ರಶೇಖರ್ ಶೆಟ್ಟಿ ರೀಜನ್ ಚೇರ್ ಪರ್ಸನ್ ಎಮ್.ಜೆ.ಎಫ್ ರಾಜೇಶ್ ಸಾಳೇಹಿತ್ತಲ್, ವಸಂತ ಪ್ರಭು, ಜನಾರ್ಧನ ನಾಯ್ಕ, ಡಾ. ಪ್ರಮೋದ ಫಾಯದೆ ಮತ್ತು ಲಯನ್ ರೇವಣಕರ್ ಆಸ್ಪತ್ರೆಯ ಜಯದೇವ ಬಳಗಂಡಿ, ಲಯನ್ಸ ಸದಸ್ಯರು ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ಜೀವೋತ್ತಮ್ ನಾಯಕ್ ಸ್ವಗತಿಸಿದರೆ, ಕಾರ್ಯದರ್ಶಿ ಡಾ. ಎ. ವಿ ಶ್ಯಾನಭಾಗ್ ಪ್ರಾಸ್ತಾವಿಕವಾಗಿ ಮಾತನಾಡಿದರು ರಾಜೇಶ್ ಸಾಳೇಹಿತ್ತಲ್ ವಂದಿಸಿದರು.

ತಾಲೂಕಿನ ವಿವಿಧ ಭಾಗಗಳಿಂದ 75ಕ್ಕೂ ಅಧಿಕ ಫಲಾನುಭವಿಗಳು ಶಿಬಿರದಲ್ಲಿ ಭಾಗವಹಿಸಿ ತಪಾಸಣೆಗೆ ಒಳಗಾದರು. ಇವರಲ್ಲಿ 20 ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

About The Author

error: Content is protected !!