December 23, 2025

೨೧ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಡಿ.೨೮ರಂದು

ಕಾರ್ಕಳ : ೨೧ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಡಿ.೨೮ರಂದು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ನ್ಯಾಯವಾದಿ ಎಂ.ಕೆ ವಿಜಯ ಕುಮಾರ್ ವೇದಿಕೆಯಲ್ಲಿ ಜರುಗಲಿದ್ದು, ಸಿದ್ದಾಪುರ ವಾಸುದೇವ ಭಟ್ಟ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಕಳ ತಾಲೂಕು ಕ.ಸಾ.ಪ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು.
ಕಾರ್ಕಳ ಪತ್ರಿಕಾ ಭವನದಲ್ಲಿ ಸೋಮವಾರ ಕಾರ್ಕಳ ತಾಲೂಕು ಕ.ಸಾ.ಪ ವತಿಯಿಂದ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.


ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಅಶ್ವಥ್ ಎಸ್.ಎಲ್ ಮಾತನಾಡಿ, ಸಮ್ಮೇಳದ ಉದ್ಘಾಟನೆಯನ್ನು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ನೆರವೇರಿಸಲಿದ್ದು, ವಿಶ್ರಾಂತ ಪ್ರಾಚಾರ್ಯ ಪ್ರೊ.ಬಿ.ಪದ್ಮನಾಭ ಗೌಡ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಸಾಂಸ್ಕöÈತಿಕ ಕಾರ್ಯಕ್ರಮವನ್ನು ಡಾ.ರವೀಂದ್ರ ಶೆಟ್ಟಿ ಬಜಗೋಳಿ ಉದ್ಘಾಟಿಸಲಿದ್ದು, ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಲಿದ್ದಾರೆ, ಸಮಾರಂಭದಲ್ಲಿ ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ ಪ್ರೊ.ಕೆ.ಗುಣಪಾಲ ಕಡಂಬ, ಕಾರ್ಕಳ ತಹಶೀಲ್ದಾರ್ ಪ್ರದೀಪ್ ಆರ್., ಶಿಕ್ಷಣಾಧಿಕಾರಿ ಗಿರಿಜಮ್ಮ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ರಾವ್.ಎಂ.ಪಿ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಸೇತಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಪುಸ್ತಕ ಸಾಂಗತ್ಯ, ವಿದ್ಯಾರ್ಥಿ ಪುಸ್ತಕ ಪ್ರೀತಿ, ಪುಸ್ತಕ ಲೋಕ ಸಾಹಿತ್ಯ ವಿಸ್ಮಯ ಎಂಬ ಮೂರು ವಿಶೇಷ ಗೋಷ್ಠಿಗಳು ಹಾಗೂ ವಿದ್ಯಾರ್ಥಿ ಯುವ ಸಾಹಿತ್ಯ ರತ್ನ ಪ್ರಶಸ್ತಿ, ಸೃಜನ ಸಾಹಿತ್ಯ ಸೌರಭ ಪ್ರಶಸ್ತಿ, ಕರುನಾಡ ಸಿರಿ ಪ್ರಶಸ್ತಿ, ಪುಸ್ತಕ ಪರಿಚಾರಕ ಪ್ರಶಸ್ತಿ ಪ್ರಧಾನವೂ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿಮುನಿಯಾಲು ಉದಯ್ ಕುಮಾರ್ ಶೆಟ್ಟಿ ಸಾಧಕರನ್ನು ಗೌರವಿಸಲಿದ್ದು, ಯೋಗೀಶ್ ಹೆಗ್ಡೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ, ಈ ಸಂದರ್ಭದಲ್ಲಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್, ನಿತ್ಯಾನಂದ ಪೈ, ದೇವದಾಸ್ ಕೆರೆಮನೆ ಉಪಸ್ಥಿತರಿದ್ದರು.

About The Author

error: Content is protected !!