ಭಟ್ಕಳ– ಅಂಕೋಲಾದ ಶೆಟಗೇರಿಯ ಸತ್ಯಾಗ್ರಹ ಸ್ಮಾರಕ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಚಿತ್ರಾಪುರ ಮಠದ ಆಡಳಿತದಲ್ಲಿ ಬರುವ ಶ್ರೀವಲ್ಲಿ ಪ್ರೌಢಶಾಲೆಯ ವಿಧ್ಯಾರ್ಥಿ ನಾಗರಾಜ ಕೃಷ್ಣ ನಾಯ್ಕ ಚರ್ಚಾ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಸತ್ಯಾಗ್ರಹ ಸ್ಮಾರಕ ವಿದ್ಯಾಲಯ ಶೆಟಗೇರಿ ಇವರು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜನೆ ಮಾಡುತ್ತಿರುವ ಅರವತ್ತೆರಡನೇ ಚರ್ಚಾ ಸ್ಪರ್ಧೆ ಇದಾಗಿದ್ದು, “ಎಸ್ ಎಸ್ ಎಲ್ ಸಿ ತೇರ್ಗಡೆಗೆ ೩೩ ಅಂಕಗಳನ್ನು ನಿಗದಿಪಡಿಸಿರುವ ಕ್ರಮ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿದೆ” ಎಂಬ ವಿಷಯದ ಬಗ್ಗೆ ಪರ ಮತ್ತು ವಿರೋಧ ಕುರಿತು ಚರ್ಚಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ವಿಷಯದ ಕುರಿತು ಪರವಾಗಿ ಮಾತನಾಡಿದ ನಾಗರಾಜ ಕೃಷ್ಣ ನಾಯ್ಕ ೮೦೦೦ ಮೊತ್ತದ ನಗದು ಬಹುಮಾನದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾನೆ. ವಿರೋಧವಾಗಿ ಮಾತನಾಡಿದ ಲಿಖಿತಾ ನಾಯ್ಕ ಪ್ರೋತ್ಸಾಹದಾಯಕ ಬಹುಮಾನ ಪಡೆದುಕೊಂಡಿರುತ್ತಾಳೆ.
ಜಿಲ್ಲೆಯಿಂದ ಸುಮಾರು ೩೦ ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದು ಈ ಸ್ಪರ್ಧೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಶ್ರೀವಲ್ಲಿ ಶಿಕ್ಷಣ ಟ್ರಸ್ಟ್ ನ ಶೈಕ್ಷಣಿಕ ಸಲಹೆಗಾರರಾದ ಡಾ. ರವೀಂದ್ರ ಕಾಯ್ಕಿಣಿ, ಮುಖ್ಯ ಶಿಕ್ಷಕಿ ಮಮತಾ ಭಟ್ಕಳ, ಮಾರ್ಗದರ್ಶಿ ಶಿಕ್ಷಕಿ ರೇಷ್ಮಾ ನಾಯಕ ಶಾಲಾ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು,ಊರ ನಾಗರಿಕರು ಅಭಿನಂದಿಸಿ ಹಾರೈಸಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ