March 2, 2026

ಭಟ್ಕಳ: ಹೊಸ ವರ್ಷದ ಸಂಭ್ರಮ—ಮುರುಡೇಶ್ವರದಲ್ಲಿ ಶಾಂತಿ, ಸುರಕ್ಷತೆಗೆ ಪೊಲೀಸ್ ಕಟ್ಟುನಿಟ್ಟಿನ ಸೂಚನೆ

ಭಟ್ಕಳ: ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಮುರುಡೇಶ್ವರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿರುವುದರಿಂದ, ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಲಾಡ್ಜ್, ರೆಸಾರ್ಟ್ ಹಾಗೂ ಗೂಡಂಗಡಿ ಮಾಲೀಕರ ಸಭೆ ನಡೆಸಲಾಯಿತು.


ವರ್ಷಾಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು, ಮಹಿಳಾ ಸುರಕ್ಷತೆಯನ್ನು ಖಚಿತಪಡಿಸುವುದು, ಧ್ವನಿವರ್ಧಕಗಳ ಬಳಕೆಯಲ್ಲಿ ನಿಗದಿತ ನಿಯಮಗಳನ್ನು ಪಾಲಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಪೊಲೀಸರು ಸಲಹೆ–ಸೂಚನೆಗಳನ್ನು ಸಿಪಿಐ ಜಗದೀಶ ಹಂಚನಾಳ,ನೀಡಿದರು.


ಸಭೆಯಲ್ಲಿ ಹೊಸ ವರ್ಷದ ಸಂಭ್ರಮದ ವೇಳೆ ಟ್ರಾಫಿಕ್ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ರಸ್ತೆ ಅಕ್ಕಪಕ್ಕದಲ್ಲಿನ ಅತಿಕ್ರಮಣ ತಪ್ಪಿಸುವುದು, ಪಾರ್ಕಿಂಗ್ ವ್ಯವಸ್ಥೆಯನ್ನು ಶಿಸ್ತಿನಿಂದ ಪಾಲಿಸುವುದು ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ವ್ಯಾಪಾರ ನಡೆಸುವಂತೆ ಅಂಗಡಿ ಮಾಲೀಕರಿಗೆ ಸೂಚಿಸಲಾಯಿತು.


ಶಾಂತಿ, ಸುರಕ್ಷತೆ ಮತ್ತು ಸುಗಮ ಸಂಚಾರ ಕಾಪಾಡುವಲ್ಲಿ ವ್ಯಾಪಾರಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರು ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮುರುಡೇಶ್ವರ ಪೊಲೀಸರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಪಿಎಸ್ಐ ಹನುಮಂತ ಬೀರಾದರ್ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

error: Content is protected !!