March 4, 2026

ಹೇಮಗಿರಿ ಬೆಟ್ಟದಲ್ಲಿ ನೆಲೆಸಿರುವ ಶ್ರೀ ಕಲ್ಯಾಣ ವೆಂಕಟರಮಣ ಸ್ವಾಮಿಯ ಶಿಲಾ ಮೂರ್ತಿಗೆ ವಿಶೇಷ ಪೂಜೆ..

ವೈಕುಂಠ ಏಕಾದಶಿಯ ಅಂಗವಾಗಿ  ಸಾವಿರಾರು ಭಕ್ತಾದಿಗಳು ಭಾಗಿ..

ಕೃಷ್ಣರಾಜಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ, ಭೂ ವೈಕುಂಠವೆಂದೇ ಪ್ರಸಿದ್ಧ ವಾಗಿರುವ ಹೇಮಗಿರಿಯ ಶ್ರೀ ಕಲ್ಯಾಣ ವೆಂಕಟರಮಣ ಸ್ವಾಮಿ ಸನ್ನಿಧಿಯಲ್ಲಿ ವೈಕುಂಠ ಏಕಾದಶಿಯ ಅಂಗವಾಗಿ ವಿಶೇಷ ಪೂಜೆ ಪುರಸ್ಕಾರಗಳು ಶ್ರದ್ದಾ ಭಕ್ತಿಯಿಂದ ನಡೆದವು.

ಸಾವಿರಾರು ಭಕ್ತಾದಿಗಳು ವೈಕುಂಠ ಏಕಾದಶಿಯ ಸಂಭ್ರಮದ ಪೂಜೆಯಲ್ಲಿ ಭಾಗಿಯಾಗಿ ದೇವರ ಕೃಪೆಗೆ ಪಾತ್ರರಾದರು. ಬೃಗು ಮಹರ್ಷಿಗಳ ತಪೋಭೂಮಿಯಾಗಿರುವ ಹೇಮಗಿರಿ ಕ್ಷೇತ್ರದಲ್ಲಿ, ಬೆಟ್ಟದ ಮೇಲೆ ನೆಲೆಸಿರುವ ಶ್ರೀ ರಂಗನಾಥಸ್ವಾಮಿಯ ಶಿಲಾಮೂರ್ತಿಗೆ ವಿಶೇಷ ಅಭಿಷೇಕ, ಪುಷ್ಪಭಿಷೇಕ ಹಾಗೂ ವಿಶೇಷ ಅಲಂಕಾರ ಮಾಡಿ ಪೂಜೆಯನ್ನು ಸಲ್ಲಿಸಿ ಲೋಕ ಕಲ್ಯಾಣಾರ್ಥವಾಗಿ ಪ್ರಾರ್ಥನೆ ನಡೆಸಲಾಯಿತು. ಆದಿಚುಂಚನಗಿರಿಯ ಹೇಮಗಿರಿ ಶಾಖಾ ಮಠದ ಗೌರವ ಕಾರ್ಯದರ್ಶಿಗಳಾದ ಡಾ.ಜೆ. ಎನ್.ರಾಮಕೃಷ್ಣೇಗೌಡ ಅವರ ನೇತೃತ್ವದಲ್ಲಿ ಶ್ರೀ ರಂಗನಾಥ ಸ್ವಾಮಿಯ ಶಿಲಾಮೂರ್ತಿಗೆ ಅಭಿಷೇಕ ಮಾಡಿ ವಿಶೇಷ ಪೂಜೆ ಸಲ್ಲಿಸಿ ಉತ್ತರ ದ್ವಾರದಲ್ಲಿ ಶ್ರೀದೇವಿ ಭೂದೇವಿ ಸಮೇತ ನಿಂತಿರುವ ಶ್ರೀ ಕಲ್ಯಾಣ ವೆಂಕಟರಮಣ ಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಭಕ್ತರಿಗೆ ವೈಕುಂಠ ದ್ವಾರದ ಪ್ರವೇಶಕ್ಕೆ ಅವಕಾಶ ಮಾಡಿಕೊಡ ಲಾಯಿತು.

ವೈಕುಂಠ ಏಕಾದಶಿ ಅಂಗವಾಗಿ ಪುಳಿಯೋಗರೆ, ಮೊಸರನ್ನ ಹಾಗೂ ಲಾಡು ಪ್ರಸಾದವನ್ನು ಭಕ್ತಾದಿಗಳಿಗೆ ವಿತರಿಸಲಾಯಿತು. ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಟಿ ಮಂಜು ರಮಾ ದಂಪತಿಗಳು, ರಾಜ್ಯದ ಮಾಜಿ ಸಚಿವರಾದ ಡಾ. ನಾರಾಯಣಗೌಡ ದೇವಕಿ ದಂಪತಿಗಳು, ಕಾಂಗ್ರೆಸ್ ನಾಯಕ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಬಿ.ಎಲ್.ದೇವರಾಜು ಉಮಾ ದಂಪತಿಗಳು ಹಾಗೂ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್ ರಮಾಮಣಿ ದಂಪತಿಗಳು, ಬಿ. ಪ್ರಕಾಶ್ ಹೇಮಾ ದಂಪತಿಗಳು ಹೇಮಗಿರಿ ಬೆಟ್ಟಕ್ಕೆ ತೆರಳಿ ಶ್ರೀ ಕಲ್ಯಾಣ ವೆಂಕಟರಮಣ ಸ್ವಾಮಿಯ ದರ್ಶನ ಪಡೆದು ಪುನೀತರಾದರು. ಬಂಡಿಹೊಳೆ, ಬಿಬಿ ಕಾವಲು, ಕುಪ್ಪಹಳ್ಳಿ, ಲಕ್ಷ್ಮಿಪುರ, ಮಾಕವಳ್ಳಿ, ನಾಟನಹಳ್ಳಿ, ಬೀರವಳ್ಳಿ, ಸಾಕ್ಷಿಬೀಡು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತಾದಿಗಳು ಹೇಮಗಿರಿ ಕ್ಷೇತ್ರದಲ್ಲಿ ನಡೆದ ವೈಕುಂಠ ಏಕಾದಶಿಯ ವೈಕುಂಠ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಧನ್ಯತಾ ಭಾವವನ್ನು ಪ್ರದರ್ಶಿಸಿದರು.

ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

About The Author

error: Content is protected !!