ಸಮಾಜಮುಖಿ ಸೇವೆಗೆ ಮಾದರಿ ಕಾರ್ಯಕ್ರಮ
ಭಟ್ಕಳ: ಶ್ರೀ ಸಂಸ್ಥಾನ ಪರ್ತಗಾಳಿ ಮಠದ ಸಾರ್ಧಪಂಚಶತಮಾನೋತ್ಸವದ ಅಂಗವಾಗಿ ಹಾಗೂ ಭಟ್ಕಳ ಮೂಲದವರಾಗಿದ್ದು ಪ್ರಸ್ತುತ ಅಮೆರಿಕದಲ್ಲಿ ನೆಲೆಸಿರುವ ಮಾಧವ ಹನುಮಂತ ಶ್ಯಾನಭಾಗ ಅವರ 80ನೇ ವರ್ಷದ ಜನ್ಮದಿನಾಚರಣೆಯ ಪ್ರಯುಕ್ತ ಭಟ್ಕಳ ಸರ್ಕಾರಿ ತಾಲೂಕು ಆಸ್ಪತ್ರೆಗೆ ಔಷಧಿ ದೇಣಿಗೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ವೈದ್ಯಾಧಿಕಾರಿ ಡಾ. ಸವಿತಾ ಕಾಮತ ಅವರು, “ಮೂಲ ಸಂಸ್ಕೃತಿ ಮತ್ತು ಗುರುತನ್ನು ಉಳಿಸಿಕೊಂಡು ಸಮಾಜಕ್ಕೆ ಕೈಲಾದಷ್ಟು ಕೊಡುಗೆ ನೀಡುವುದು ಪ್ರತಿಯೊಬ್ಬರ ಕರ್ತವ್ಯ. ಇಂತಹ ಸೇವಾ ಕಾರ್ಯಗಳು ಮಾನವೀಯ ಮೌಲ್ಯಗಳನ್ನು ಗಟ್ಟಿಗೊಳಿಸುತ್ತವೆ” ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಂಶುಪಾಲ ಶ್ರೀನಾಥ ಪೈ ಅವರು, ಭಟ್ಕಳ ಜಿಎಸ್‌ಎಸ್ ಸಂಸ್ಥೆಯ ಕಾರ್ಯಚಟುವಟಿಕೆಗಳು ಹಾಗೂ ಹನುಮಂತ ಶ್ಯಾನಭಾಗ ಕುಟುಂಬದ ಸಮಾಜಮುಖಿ ಸೇವಾ ಪರಂಪರೆಯನ್ನು ವಿವರಿಸಿದರು. “ಜನ್ಮದಿನಾಚರಣೆಯನ್ನು ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸರ್ಕಾರಿ ಆಸ್ಪತ್ರೆ ಹಾಗೂ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಿರುವುದು ಶ್ಲಾಘನೀಯ” ಎಂದರು.

ಸರ್ಕಾರಿ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಅರುಣಕುಮಾರ ಮಾತನಾಡಿ, “ದೇಣಿಗೆಯಾಗಿ ಲಭಿಸಿರುವ ಬ್ರ್ಯಾಂಡೆಡ್ ಔಷಧಿಗಳನ್ನು ರೋಗಿಗಳ ಚಿಕಿತ್ಸೆಗೆ ಸಮರ್ಪಕವಾಗಿ ಬಳಸಿಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿಯೂ ಇಂತಹ ಸಹಕಾರ ನಿರಂತರವಾಗಲಿ” ಎಂದು ಆಶಿಸಿದರು.
ಮಾಧವ ಹನುಮಂತ ಶ್ಯಾನಭಾಗ ಕುಟುಂಬದ ಪರವಾಗಿ ಶ್ರೀರಂಗ ಶ್ಯಾನಭಾಗ ಅವರು ಔಷಧಿಗಳನ್ನು ಭಟ್ಕಳ ಸರ್ಕಾರಿ ತಾಲೂಕು ಆಸ್ಪತ್ರೆಗೆ ಅಧಿಕೃತವಾಗಿ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಜಿಎಸ್‌ಬಿ ಸಮಾಜದ ಅಧ್ಯಕ್ಷ ನಾಗೇಶ ಕಾಮತ, ವೈದ್ಯರಾದ ಡಾ. ಸತೀಶ ಕುಮಾರ, ಡಾ. ಸುರಕ್ಷಿತ ಶೆಟ್ಟಿ, ಡಾ. ಪ್ರಕಾಶ ನಾಯ್ಕ,ಹಿರಿಯ ಫಾರ್ಮಸಿ ಅಧಿಕಾರಿ ರಾಘವೇಂದ್ರ ಹೊಳ್ಳ,ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ನರೇಂದ್ರ ನಾಯಕ ವಂದನಾರ್ಪಣೆ ಸಲ್ಲಿಸನಾಯ್ಕ
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ