ಭಟ್ಕಳ: ಇತ್ತೀಚೆಗೆ ವರ್ಗಾವಣೆಯಾಗಿದ್ದ ಪ್ರಭಾರೆ ಸಹಾಯಕ ಆಯುಕ್ತೆ ಕಾವ್ಯಾರಾಣಿ ಅವರಿಗೆ ತಾಲೂಕಾಡಳಿತದಿಂದ ಮಂಗಳವಾರ ಬೀಳ್ಕೊಡುಗೆ ನೀಡಲಾಯಿತು.
ನೂತನ ಪ್ರಭಾರ ಸಹಾಯಕ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಹೊನ್ನಾವರ ತಾಲೂಕ ತಹಸೀಲ್ದಾರ್ ಪ್ರವೀಣ ಕರಾಂಡೆ ಅವರನ್ನು ಸ್ವಾಗತಿಸಲಾಯಿತು.
ಸಮಾರಂಭದಲ್ಲಿ ನಾಗೇಂದ್ರ ಕೊಳಶೆಟ್ಟಿ ಹಾಗೂ ಹೊನ್ನಾವರ ತಹಸೀಲ್ದಾರ್ ಹಾಗೂ ನೂತನ ಪ್ರಭಾರ ಸಹಾಯಕ ಆಯುಕ್ತ ಪ್ರವೀಣ ಕರಾಂಡೆ ಶಾಲು ಹೊದಿಸಿ ಗೌರವಿಸಿದರು.
ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿದ ಕಾವ್ಯಾರಾಣಿ ತಾಲೂಕಿನಲ್ಲಿ ಒಂದೂ ವರ್ಷಗಳ ಕಾಲ ಸಹಾಯಕ ಆಯುಕ್ತೆಯಾಗಿ ಸೇವೆ ಸಲ್ಲಿಸಿದ್ದು ನನಗೆ ದೊರೆತ ಅದೃಷ್ಟ. ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿ, ಸಂಘ–ಸಂಸ್ಥೆಗಳ ಮುಖಂಡರು, ಸಂಘಟನೆಯ ಪ್ರತಿನಿಧಿಗಳ ಸಹಕಾರ ಸಿಕ್ಕಿದೆ. ನನಗೆ ತೋರಿದ ಪ್ರೀತಿ ಬೆಂಬಲಕ್ಕೆ ಚಿರಋಣಿಯಾಗಿದ್ದೇನೆ’ ಎಂದರು.
ಈ ಕಾರ್ಯಕ್ರಮದಲ್ಲಿ ಕಂದಾಯ ನಿರೀಕ್ಷಕರು, ಸಹಾಯಕ ಆಯುಕ್ತರ ಹಾಗೂ ತಹಸೀಲ್ದಾರರ ಕಾರ್ಯಾಲಯದ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ