ಭಟ್ಕಳ: ನಾಮಧಾರಿ ಸಮಾಜದ ಹಿರಿಯ ಮುಖಂಡ ಹಿರಿಯ ಕಾಂಗ್ರೆಸ್ ಧುರೀಣ ಎಲ್. ಎಸ್. ನಾಯ್ಕ ಮುಂಡಳ್ಳಿ (೮೫) ಶುಕ್ರವಾರ ಉಡುಪಿಯ ಖಾಸಗೀ ಆಸ್ಪತ್ರೆಯಲ್ಲಿ ನಿದನ ಹೊಂದಿದರು.
ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದು ಭಟ್ಕಳ ತಾಲೂಕಾ ಪಂಚಾಯತ್ ಅಧ್ಯಕ್ಷರಾಗಿ, ಪ್ರತಿಷ್ಠಿತ ಪಿ.ಎಲ್.ಡಿ. ಬ್ಯಾಂಕಿನ ನಿರ್ದೇಶಕರಾಗಿ, ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ನಾಮಧಾರಿ ಸಮಾಜದ ಹಿರಿಯರಾದ ಇವರು ನಾಮಧಾರಿ ಸಮಾಜದ ಗುರುಮಠದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ನಾಮಧಾರಿ ಸಮಾಜದ ಗುರು ಮಠದ ಪರಮ ಭಕ್ತರಾಗಿದ್ದ ಅವರು ನಿಚ್ಚಲಮಕ್ಕೀ ಶ್ರೀ ತಿರುಮಲ ವೆಂಕಟ್ರಮಣ ದೇವರಿಗೆ ಬೆಳ್ಳಿಯ ಪಾಲಕಿ ಹಾಗೂ ಶ್ರೀ ದೇವರಿಗೆ ಬಂಗಾರದ ಕಿರೀಟವನ್ನು ಸಮರ್ಪಣೆ ಮಾಡಿದ್ದರು. ಕುಲಗುರುಗಳಾದ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿ ಹಾಗೂ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪರಮ ಶಿಷ್ಯರಾಗಿದ್ದ ಅವರು ಭಟ್ಕಳದ ಕರಿಕಲ್‌ನಲ್ಲಿ ಶ್ರೀ ಗುರುಮಠದ ವತಿಯಿಂದ ಧ್ಯಾನ ಮಂದಿರ ನಿರ್ಮಾಣಕ್ಕೆ ಉಚಿತವಾಗಿ ಭೂಮಿಯನ್ನು ನೀಡಿದ್ದರು.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು, ಅನೇಕ ಬಡ ಜನತೆಗೆ ಸಹಾಯ ಮಾಡಿದ್ದರು. ತಮ್ಮ ಸೇವಾ ಕಾರ್ಯಗಳಿಂದ ಗುರುತಿಸಿಕೊಂಡಿದ್ದ ಅವರು ಸಮಾಜದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರು ಇಬ್ಬರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ