ಹೊನ್ನಾವರ: ಸಮಾಜದ ಎಲ್ಲ ವರ್ಗಗಳ ಜನರಿಗೆ ಆರ್ಥಿಕ ಸಹಾಯ ಒದಗಿಸುವ ಸಹಕಾರ ತತ್ವದಡಿಯಲ್ಲಿ `ಸಿಂಧೂರ ಸೌಹಾರ್ದ ಸಹಕಾರಿ ಸಂಘವು’ ಪಟ್ಟಣದ ದುರ್ಗಾದೇವಿ ರಸ್ತೆಯಲ್ಲಿರುವ ವಿನಾಯಕ ಶೇಟ್ ಕಟ್ಟಡದಲ್ಲಿ ನೂತನವಾಗಿ ಸ್ಥಾಪನೆಗೊಂಡಿದೆ. ಇದರ ಉದ್ಘಾಟನಾ ಸಮಾರಂಭ ಜ. ೩೧ ರಂದು ಮಧ್ಯಾಹ್ನ ೩ ಗಂಟೆಗೆ ಶ್ರೀ ಮೂಡಗಣಪತಿ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜಿ.ಎನ್.ಗೌಡ ಕೊಡಾಣಿ ತಿಳಿಸಿದರು.
ಸಂಘದ ಕಚೇರಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಹಕಾರಿ ಸಚಿವ ಜಿ.ಟಿ.ದೇವೇಗೌಡ ಶೇರು ಪ್ರಮಾಣಪತ್ರ ಬಿಡುಗಡೆಗೊಳಿಸುವರು. ಸಂಘದ ಅಧ್ಯಕ್ಷ ಜಿ.ಎನ್.ಗೌಡ ಅಧ್ಯಕ್ಷತೆ ವಹಿಸುವರು. ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ, ಶಾಸಕ ಶಿವರಾಮ ಹೆಬ್ಬಾರ ಠೇವಣಿ ಪ್ರಮಾಣಪತ್ರ ಬಿಡುಗಡೆಗೊಳಿಸುವರು. ಶಾಸಕ ದಿನಕರ ಶೆಟ್ಟಿ ಕಚೇರಿ ಉದ್ಘಾಟಿಸುವರು. ನೀಲಗೋಡದ ಶ್ರೀ ಮಾದೇವ ಸ್ವಾಮಿ ಭದ್ರತಾ ಕೊಠಡಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸುನೀಲ ನಾಯ್ಕ, ಅಡಿಶನಲ್ ಎಸ್‌ಪಿ ಜಗದೀಶ ನಾಯ್ಕ, ಕಾಂಗ್ರೆಸ್ ಮುಖಂಡ ನಿವೇದಿತ್ ಆಳ್ವ, ನಿವೃತ್ತ ಪ್ರಾಧ್ಯಾಪಕ ಡಾ. ನಾಗೇಶ ನಾಯ್ಕ ಕಾಗಾಲ, ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ, ತಂಜೀಮ ಅಧ್ಯಕ್ಷ ಇನಾಯತುಲ್ಲ ಶಾಬಂದ್ರಿ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಸಂಘದ ನಿರ್ದೇಶಕರಾದ ಎಸ್.ಎನ್.ನಾಯಕ, ಆನಂದ ಆಚಾರಿ, ವಿಷ್ಣು ದೇವಾಡಿಗ, ಪ್ರಭು ಪಟಗಾರ, ಮಾಲತಿ ಶೇಟ್, ಗಣಪತಿ ಗೌಡ, ರಾಮನಾಥ ನಾಯ್ಕ, ಶೀಲಾನಂದ ಗೌಡ ಹಾಗೂ ಸಿಬ್ಬಂದಿ ಇದ್ದರು.

More Stories
ಗುಣವಂತೆ ಶ್ರೀ ಶಂಭು ಶಂಭುಲಿಂಗೇಶ್ವರ ದೇವಾಲಯದಲ್ಲಿ ಧಾರ್ಮಿಕ ಸಭೆ ವೈಭವ
ಶ್ರೀ ಶಂಭು ಲಿಂಗೇಶ್ವರ ದೇವಸ್ಥಾನದ ನೂತನ ಶಿಲಾಮಯ ಶಿವಾಲಯ ಲೋಕಾರ್ಪಣೆ
ಸಿ.ಎ ಕನಸು ಹೊತ್ತ ಗ್ರಾಮೀಣ ಪ್ರತಿಭೆ ಚಿನ್ನಯಿ ಶೆಟ್ಟಿ, ಪಿಯುಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ