ಭಟ್ಕಳ: ಮುರ್ಡೇಶ್ವರ ರೈಲ್ವೆ ನಿಲ್ದಾಣಕ್ಕೆ ತೆರಳುವ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಖುಲ್ಲಾ ಜಾಗದಲ್ಲಿ ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಸುಮಾರು 30–35 ವರ್ಷದ ವಯಸ್ಸಿನ ಅಪರಿಚಿತ ಮಹಿಳೆ ಎಲ್ಲಿಂದಲೋ ಮುರ್ಡೇಶ್ವರಕ್ಕೆ ಬಂದಿರಬಹುದೆಂದು ಶಂಕಿಸಲಾಗಿದ್ದು, ಮುರ್ಡೇಶ್ವರ ರೈಲ್ವೆ ನಿಲ್ದಾಣಕ್ಕೆ ಹೋಗುವ ಸರ್ವೀಸ್ ರಸ್ತೆಯ ಪಕ್ಕದ ಖುಲ್ಲಾ ಜಾಗದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಪ್ರಾಥಮಿಕವಾಗಿ ಖಾಯಿಲೆ, ಆಹಾರಾಭಾವ ಅಥವಾ ಇತರ ಕಾರಣಗಳಿಂದ ಸಾವನ್ನಪ್ಪಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಮೃತಳು ಸುಮಾರು 5 ಅಡಿ 2 ಇಂಚು ಎತ್ತರ ಹೊಂದಿದ್ದು, ಕಪ್ಪು ಮೈವರ್ಣದವರಾಗಿದ್ದಾರೆ. ನೀಲಿ ಲೆಗ್ಗಿಂಗ್ ಪ್ಯಾಂಟ್ ಹಾಗೂ ಕ್ರೀಮ್ ಬಣ್ಣದ ಅರ್ಧ ಹರಿದ ಟಾಪ್ ಧರಿಸಿದ್ದಾಳೆ ಎಂದು ತಿಳಿದುಬಂದಿದೆ.
ಈ ಕುರಿತು ಮುರಡೇಶ್ವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಳ ಗುರುತು ಪತ್ತೆ ಹಾಗೂ ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

More Stories
ಭಟ್ಕಳ ನ್ಯೂ ಇಂಗ್ಲಿಷ್ ಶಾಲೆ ಪೂರ್ವ ವಿದ್ಯಾರ್ಥಿಗಳ ಸಮಾಗಮ ಏ.29ರಂದು
ಮಣ್ಕುಳಿ ಪ್ರೀಮಿಯರ್ ಲೀಗ್–2026: ರಾಯಲ್ ಸಾಮ್ರಾಟ್ ಚಾಂಪಿಯನ್
ಮೀನುಗಾರಿಕೆಗೆ ತೆರಳಿದ ವ್ಯಕ್ತಿ ಸಮುದ್ರದಲ್ಲಿ ಮುಳುಗಿ ಸಾವು