ಭಟ್ಕಳ: ತಾಲೂಕಿನ ಶಿರಾಲಿ ಚಿತ್ರಾಪುರದಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ.
ಮೃತರನ್ನು ಶಂಕರ ತಂದೆ ನಾಗಪ್ಪ ದೇವಡಿಗ (32), ಚಿತ್ರಾಪುರ–ಶಿರಾಲಿ ನಿವಾಸಿ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣಗಳಿಂದ ಮನನೊಂದು ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಶಿರಾಲಿ ಚಿತ್ರಾಪುರದಲ್ಲಿರುವ ಖಾಸಗಿ ಬ್ಯಾಂಕ್‌ನ ಹಿಂಭಾಗದ ವಾಶ್‌ರೂಮ್ ಪಕ್ಕದಲ್ಲಿನ ಪಾಕಾಶಿಯಲ್ಲಿ ನೈಲಾನ್ ದಾರದಿಂದ ಉರುಳು ಹಾಕಿಕೊಂಡ ಸ್ಥಿತಿಯಲ್ಲಿ ಶಂಕರ ಅವರ ಮೃತದೇಹ ಪತ್ತೆಯಾಗಿದೆ.

ಈ ಸಂಬಂಧ ಮೃತನ ಅಕ್ಕ ಶೋಭಾ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ