March 2, 2026

ಮುರುಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆ ಕಲ್ಪಿಸಿ ಕೊಡುವುದು ಗ್ರಾಮ ಪಂಚಾಯಿತಿಗಳ ಆದ್ಯ ಕರ್ತವ್ಯವಾಗಿದೆ. ಗ್ರಾ.ಪಂ. ಅಧ್ಯಕ್ಷ ಜಗದೀಶ್ ಅಭಿಮತ.

ಕೋವಿಡ್ ಸಂಕಷ್ಟದ ನಡುವೆಯೂ ಗ್ರಾಮ ಪಂಚಾಯಿತಿಯ ಐದು ವರ್ಷಗಳ ಅವಧಿಯಲ್ಲಿ ಗ್ರಾಮಾಭಿವೃದ್ಧಿಗೆ ಪೂರಕವಾಗಿ, ಜನಪರವಾಗಿ ಕೆಲಸ ಮಾಡಿದ ತೃಪ್ತಿ ಇದೆ ಎಂದು ಮುರುಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಗಸರಹಳ್ಳಿ ದೇವರಾಜು ಹೇಳಿದರು. ಅವರು ಇಂದು ಮುರುಕನಹಳ್ಳಿ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ತಮ್ಮ ಸದಸ್ಯತ್ವದ ಅವಧಿಯು ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಮಾತನಾಡಿದರು. ಗ್ರಾಮ ಸ್ವರಾಜ್ಯದ ಕನಸು ನನಸಾಗಬೇಕಾದರೆ ಗ್ರಾಮ ಪಂಚಾಯಿತಿಗಳು ಬಲವರ್ಧನೆ ಯಾಗಬೇಕು ಆದರೆ ನಮ್ಮ ಸರ್ಕಾರ ಹಾಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಕಾಲಕಾಲಕ್ಕೆ ಗ್ರಾಮ ಪಂಚಾಯಿತಿಗಳಿಗೆ ಅನುದಾನ ಬಿಡುಗಡೆಯಾಗದೆ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರಗಳು ಗ್ರಾಮೀಣ ಭಾರತದ ಹೆಮ್ಮೆಯ ಸಂಕೇತವಾಗಿರುವ ಗ್ರಾಮ ಪಂಚಾಯಿತಿಗಳಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಮೂಲಕ ಗ್ರಾಮೀಣ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದ ದೇವರಾಜು ಕುಡಿಯುವ ಶುದ್ಧ ನೀರು ಸ್ವಚ್ಛತೆ ಬೀದಿ ದೀಪಗಳ ನಿರ್ವಹಣೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡುವುದು ಗ್ರಾಮ ಪಂಚಾಯಿತಿಗಳ ಆದ್ಯ ಕರ್ತವ್ಯವಾಗಿದೆ ಈ ದಿಕ್ಕಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ ಎಂದು ದೇವರಾಜು ಹೇಳಿದರು.

ಮುರುಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗಧೀಶ್, ಉಪಾಧ್ಯಕ್ಷೆ ಹಿರಳಹಳ್ಳಿ ನಂದಿನಿ, ಪೂರ್ಣಿಮಾ ಹೆಮ್ಮನಹಳ್ಳಿ ಲಲಿತ, ಶಿವಸಾಗರ್, ಹಿರಳಹಳ್ಳಿ ಶೇಖರ್, ಕುಮಾರಸ್ವಾಮಿ, ಬಿ.ಎಸ್.ಪುಷ್ಪ ಹೆಚ್.ಟಿ. ಜಗದೀಶ್, ರುಕ್ಮಿಣಿ, ರತ್ನಮ್ಮ, ಕವಿತಾ, ಲೀಲಾವತಿ, ಧನಂಜಯ, ಪುನೀತ್ ಕುಮಾರ್, ಹಾಗೂ ಶೋಭಾ ಸಭೆಯಲ್ಲಿ ಮಾತನಾಡಿದರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಎಸ್. ರವಿಕುಮಾರ್, ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರನ್ನು ಸ್ವಾಗತಿಸಿ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಿ ಬೀಳ್ಕೊಟ್ಟರು ಕಾರ್ಯದರ್ಶಿ ಎ.ಪಿ. ಮಲ್ಲೇಗೌಡ ಸಭೆಯ ನೇತೃತ್ವ ವಹಿಸಿದ್ದರು. ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

About The Author

error: Content is protected !!