ಹೊನ್ನಾವರ : ತಾಲೂಕಾ ಕಾನೂನು ನೆರವು ಸಮಿತಿ, ವಕೀಲರ ಸಂಘ, ಅಭಿಯೋಜನೆ ಇಲಾಖೆ ಹಾಗೂ ತಾಲೂಕಾಡಳಿತ ಹೊನ್ನಾವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆಯ

ನ್ನು ಶರಾವತಿ ಎಗ್ರೋ ಟೆಕ್ ಪ್ರೈ. ಲೀ., ಆವರಣದಲ್ಲಿ ಸೋಮವಾರ ನಡೆಯಿತು.
ಹೊನ್ನಾವರ ಸಿವಿಲ್ ನ್ಯಾಯಾಧೀಶ ಬಿ.ಸಿ ಚಂದ್ರಶೇಖರ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ ಪ್ರವೀಣ ಕರಾಂಡೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸಹಾಯಕ ಸರ್ಕಾರಿ ಅಭಿಯೊಜಕಿ ಸಂಪದಾ ಗುನಗಾ, ಜೀತ ಪದ್ದತಿ ನಿರ್ಮೂಲನಾ ಕಾಯ್ದೆಯ ಕುರಿತು ಉಪನ್ಯಾಸ ನೀಡಿದರು.
ಜೆ.ಎಂ ಎಫ್ ಸಿ ನ್ಯಾಯಾಧೀಶ ಅನಿಲ್ ಜೋನ್ ಸಿಕ್ವೇರಾ, ಪ.ಪಂ ಮುಖ್ಯಾಧಿಕಾರಿ ಎಸು ಸುಬ್ರಹ್ಮಣ್ಯ, ವಕೀಲರ ಸಂಘದ ಅಧ್ಯಕ್ಷ ವಿ.ಎಂ ಭಂಡಾರಿ, ಕಾರ್ಯದರ್ಶಿ ಉದಯ ನಾಯ್ಕ ಚಿತ್ತಾರ, ಶರಾವತಿ ಎಗ್ರೋ ಟೆಕ್ ಪ್ರೆöÊ. ಲೀ.,ನ ಮಾಲೀಕರಾದ ಗಿರೀಶ ಭಕ್ತ ವೇಧಿಕೆಯಲ್ಲಿ ಉಪಸ್ಥಿತರಿದ್ದರು.
ಯುವ ಜನ ಕ್ರೀಡಾಧಿಕಾರಿ ಸುಧೀಶ ನಾಯ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ಹೊನ್ನಾವರದಲ್ಲಿ ಜುಲೈ 26ರಂದು ‘ಕಾರ್ಗಿಲ್ ವಿಜಯ ದಿವಸ’: ಬೃಹತ್ ರ್ಯಾಲಿ ಹಾಗೂ ಹುತಾತ್ಮ ಯೋಧರಿಗೆ ಪುಷ್ಪನಮನ ಕಾರ್ಯಕ್ರಮ
ಕ್ರೀಡಾಕೂಟದಲ್ಲಿ ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಅದ್ಭುತ ಸಾಧನೆ:
ಕಿಸಾ (KISA) ಯೋಗ ಸ್ಪರ್ಧೆ: ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಗೆ ಪ್ರಥಮ ಸ್ಥಾನ