ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಗ್ರಾಮ ಪಂಚಾಯಿತಿವತಿಯಿಂದ 16 ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಯಿತು.

ಪಂಚಾಯಿತಿಯ ವಸುಲಾತಿಯ ಶೇಕಡ 25% ಸೀಮಿತ ಹಣಕಾಸಿನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡ ಅನುದಾನದಲ್ಲಿ 16 ಹೊಲಿಗೆ ಯಂತ್ರವನ್ನು ಖರೀದಿ ಮಾಡಲಾಗಿತ್ತು.
ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ್,ಸದಸ್ಯರು ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿ ಚಲುವರಾಜು, ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ವಿತರಣೆ ಮಾಡಿದ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಪ್ರಗತಿಯಾಗಲು ಸ್ವಂತ ಉದ್ಯಮವನ್ನು ಮಾಡಬೇಕು.ಅದಕ್ಕಾಗಿ ಹೊಲಿಗೆ ಯಂತ್ರ ನೀಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಸ್ಥಾನ ಐದು ವರ್ಷ ಪೂರ್ಣಕೊಂಡ ಹಿನ್ನಲೆ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರಿಗೆ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು..
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಚಂದ್ರಶೇಖರ್, ಉಪಾದ್ಯಕ್ಷೆ ರೇಣುಕಮ್ಮ, ಸದಸ್ಯರಾದ ರಾಜೇಶ್, ಪುಟ್ಟರಾಜು, ಪುಟ್ಟೇಗೌಡ, ಕೆ ಆರ್ ಕೃಷ್ಣ, ತೇಜಸ್ಬಿ, ಯೋಗೇಶ್, ಬಾಲಕೃಷ್ಣ, ಜ್ಯೋತಿ, ಜಯಲಕ್ಷ್ಮಿ, ಸುನಿತಾ, ಸರಸ್ಪತಿ, ಪದ್ಮಾವತಿ, ಭಾರತಿ ತಾಯಮ್ಮ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚಲುವರಾಜು, ಕಾರ್ಯದರ್ಶಿ ಪಾಪೇಗೌಡ, ಲೆಕ್ಕ ಸಹಾಯಕ ವಾಸು, ಬಿಲ್ ಕಲೆಕ್ಟರ್ ಶ್ರೀಕಾಂತ್, ಸಿಬ್ಬಂದಿಗಳಾದ ಪ್ರದೀಪ್, ಕಿರಣ್, ಮಲ್ಲೇಶ್, ಸೇರಿದಂತೆ ಮತ್ತಿತ್ತರರು ಇದ್ದರು..
ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ

More Stories
ಕೆ.ಆರ್. ಪೇಟೆ ಪಿ.ಎಲ್.ಡಿ ಬ್ಯಾಂಕ್ ನೂತನ ಉಪಾಧ್ಯಕ್ಷರಾಗಿ ಲಕ್ಷ್ಮೀಪುರ ಚಂದ್ರೇಗೌಡ ಅವಿರೋಧ ಆಯ್ಕೆ
ಸಾಧಿಸುವ ಛಲ, ಏಕಾಗ್ರತೆಯಿಂದ ಗುರಿ ತಲುಪಿ; ವಿದ್ಯಾರ್ಥಿಗಳಿಗೆ ಉಪ ವಿಭಾಗಾಧಿಕಾರಿ ಕೆ.ಆರ್.ಶ್ರೀನಿವಾಸ್ ಕಿವಿಮಾತು
ಕೆ.ಆರ್.ಪೇಟೆ: ಪರೋಪಕಾರ, ಸೇವಾ ಮನೋಭಾವನೆ ವಿದ್ಯಾರ್ಥಿಗಳ ಜೀವನದ ಉಸಿರಾಗಲಿ; ಶಿಕ್ಷಣ ತಜ್ಞೆ ಜೆ. ಉಮಾದೇವಿ