ಭಟ್ಕಳ: ಮುರುಡೇಶ್ವರದಲ್ಲಿ ನಡೆಯುವ ಮಹಾಶಿವರಾತ್ರಿ–2026ರ ಅಂಗವಾಗಿ ದೇವಸ್ಥಾನಕ್ಕೆ ಹಾಗೂ ಉತ್ಸವಕ್ಕೆ ಆಗಮಿಸುವ ಭಕ್ತರು ಮತ್ತು ಸಾರ್ವಜನಿಕರಿಗೆ ವಿಶೇಷ ಅನುಕೂಲ ಕಲ್ಪಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಕ್ಯೂಆರ್ ಕೋಡ್ ಹೊಂದಿದ ಬ್ಯಾನರ್ ಬಿಡುಗಡೆ ಮಾಡಲಾಗಿದೆ.
ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪಾರ್ಕಿಂಗ್ ಸ್ಥಳಗಳ ಮಾಹಿತಿ, ಪೊಲೀಸ್ ಸಹಾಯ ಕೇಂದ್ರ, ಆಸ್ಪತ್ರೆ ವಿವರ, ಬೀಚ್ ಪ್ರದೇಶದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು, ಪ್ರಮುಖ ದೂರವಾಣಿ ಸಂಖ್ಯೆಗಳು, ರೈಲು ನಿಲ್ದಾಣ ಮತ್ತು ಬಸ್ ನಿಲ್ದಾಣದ ಮಾಹಿತಿ ಸೇರಿದಂತೆ ಅಗತ್ಯ ವಿವರಗಳು ಲಭ್ಯವಾಗಲಿವೆ.
ಈ ಬ್ಯಾನರ್ಗಳನ್ನು ಪ್ರಮುಖ ಸ್ಥಳಗಳಲ್ಲಿ ಅಳವಡಿಸಲಾಗಿದ್ದು, ಭಕ್ತರಿಗೆ ತ್ವರಿತವಾಗಿ ಮಾಹಿತಿ ಪಡೆಯಲು ಅನುಕೂಲವಾಗಲಿದೆ.
ಕ್ಯೂಆರ್ ಕೋಡ್ ಬಿಡುಗಡೆ ಕಾರ್ಯಕ್ರಮದಲ್ಲಿ ಡಾ. ಪುಷ್ಪಲತಾ ವೈದ್ಯ, ಎಸ್.ಎಸ್. ಕಾಮತ್, ಶಂಕರ ಭಟ್ರಹಿತ, ನಯನಾ ನಾಯ್ಕ, ಮಂಜುನಾಥ ನಾಯ್ಕ, ಮಂಜುನಾಥ ಶೆಟ್ಟಿ ಹಾಗೂ ಸಬ್ ಇನ್ಸಪೆಕ್ಟರ್ ಹಣಮಂತ ಬೀರಾದರ ಉಪಸ್ಥಿತರಿದ್ದರು.
About The Author


More Stories
ಮುರ್ಡೇಶ್ವರದಲ್ಲಿ ಭವ್ಯ ಬಿಲ್ವಾರ್ಚನೆ: 2 ಸಾವಿರಕ್ಕೂ ಅಧಿಕ ಭಕ್ತರು ಭಾಗಿ
ಭಟ್ಕಳದಲ್ಲಿ ಮನೆಯ ಶೆಡ್ನಿಂದ ಹೋಂಡಾ ಸ್ಕೂಟಿ ಕಳವು
ದೇಶಸೇವೆಯೊಂದಿಗೆ ಸಮಾಜಮುಖಿ ಕಾರ್ಯದಲ್ಲಿ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ: ಮುರ್ಡೇಶ್ವರ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ