ಭಟ್ಕಳ: ಇಲ್ಲಿನ ಸರ್ಪನಕಟ್ಟೆಯಲ್ಲಿರುವ ಶ್ರೀ ವಾಸುಕಿ ಸರ್ಪ ದೇವಸ್ಥಾನದ ವರ್ಧಂತ್ಯೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಫೆಬ್ರವರಿ 19 ಮತ್ತು 20 ರಂದು ವಿಜೃಂಭಣೆಯಿಂದ ನಡೆಸಲಾಗುತ್ತದೆ ಎಂದು ದೇವಸ್ಥಾನದ ಗುರುವಂದನಾ ಕಾರ್ಯಕ್ರಮ ಸಮಿತಿಯ ಸದಸ್ಯ ಗೋವರ್ಧನ ನಾಯ್ಕ ತಿಳಿಸಿದ್ದಾರೆ.

ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಸವದ ಪ್ರಯುಕ್ತ ಫೆಬ್ರವರಿ 19 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಬೈಕ್ ರ‍್ಯಾಲಿ ಮೂಲಕ ಶ್ರೀ ಮೇಲುಕೋಟೆ ಜಗದ್ಗುರು ಶ್ರೀ ರಾಮಾನುಜಾಚಾರ್ಯ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಯತಿರಾಜ ಜೀಯರ್ ಸ್ವಾಮೀಜಿ ಅವರನ್ನು ಸ್ವಾಗತಿಸಲಾಗುತ್ತದೆ ಎಂದರು.
ಅನಂತರ ದೇವಸ್ಥಾನದಲ್ಲಿ ಗುರುವಂದನಾ ಕಾರ್ಯಕ್ರಮ ಹಾಗೂ ಸ್ವಾಮೀಜಿಗಳ ಆಶೀರ್ವಚನ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಮಹಾ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಫೆಬ್ರವರಿ 20 ರಂದು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರೀ ಗುರುಗಳಿಂದ ಮಂತ್ರಾಕ್ಷತೆ ಮತ್ತು ಆಶೀರ್ವಚನ ಕಾರ್ಯಕ್ರಮ ನೆರವೇರಲಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ದೇವಸ್ಥಾನದ ಅಧ್ಯಕ್ಷ ಗಜಾನನ ನಾಯ್ಕ, ಗೌರವಾಧ್ಯಕ್ಷ ಹನುಮಂತ ನಾಯ್ಕ, ಉಪಾಧ್ಯಕ್ಷ ಶರತ್ ನಾಯ್ಕ, ಕಾರ್ಯದರ್ಶಿ ಶೇಖರ ನಾಯ್ಕ, ಉಮೇಶ ನಾಯ್ಕ, ರಮೇಶ ನಾಯ್ಕ, ಸತೀಶ ನಾಯ್ಕ, ಚಂದ್ರಕಾಂತ ನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ