ಹೊನ್ನಾವರ: ಕಳೆದ ನಾಲ್ಕು ದಿನದಿಂದ ಪಟ್ಟಣದ ಸೆಂತ್ ಅಂತೋನಿ ಮೈದಾನದಲ್ಲಿ ಸಾವಿರಾರು ಸಂಖ್ಯೆಯ ಪೇಕ್ಷಕರ ಮನಸೊರೆಗೊಂಡಿರುವ “ಹೊನ್ನಾವರ ಉತ್ಸವ” ಕಾರ್ಯಕ್ರಮದ ಸಮಾರೋಪ ಸಮಾರಂಭ ಫೆಬ್ರವರಿ 22 ಜರುಗಲಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಲೋಕೊಪಯೋಗಿ ಸಚಿವರಾದ ಸತೀಶ ಜಾರಕಿಹೊಳೆ ಆಗಮಿಸಲಿದ್ದಾರೆ.
ಈ ಬಗ್ಗೆ ಉತ್ಸವ ಸಮಿತಿ ಗೌರವಾಧ್ಯಕ್ಷ ಮಂಜುನಾಥ ನಾಯ್ಕ, ಹಾಗೂ ಕಾಂಗ್ರೇಸ್ ಮುಖಂಡರಾದ ವಿನಾಯಕ ಶೆಟ್ಟಿ ಜಂಟಿ ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದು, ರಾಜ್ಯ ಮಟ್ಟದ ವಿವಿಧ ಕಲಾವಿದರ ನೃತ್ಯ, ಸಂಗೀತ ಕಾರ್ಯಕ್ರಮದ ಮೂಲಕ ಪೇಕ್ಷರ ಮನ ಗೆದ್ದಿರುವ ಕಾರ್ಯಕ್ರಮದಲ್ಲಿ ಹಲವು ಸ್ಥಳಿಯ ಪ್ರತಿಭಾವಂತ ಕಲಾವಿದರ ಪ್ರತಿಭೆ ಅನಾವರಗೊಂಡಿದೆ. ವಿವಿಧ ಕ್ಷೇತ್ರದ ಸಾಧಕರಿಗೆ ಅದ್ದೂರಿ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಗಿದೆ. ಸಮಾರೋಪ ಸಮಾರಂಭದ ಕಾರ್ಯಕ್ರಮಕ್ಕೆ ರಾಜ್ಯದ ಲೊಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳೆ ಆಗಮಿಸುತ್ತಿದ್ದು, ಸಾಯಂಕಾಲ ಹೆಲಿಪ್ಯಾಡ್ ಮೂಲಕ ಆಗಮಿಸಿ ಸಂಜೆ ಹೊನ್ನಾವರ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಕುಮಟಾದಲ್ಲಿ ವಾಸ್ತವ್ಯ ಇರಲಿದ್ದಾರೆ.


ಹೊನ್ನಾವರ ಉತ್ಸವ ಸಭಾ ಕಾರ್ಯಕ್ರಮದ ನಂತರ ಜೀ ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ, ಕಲಾವಿದೆ ನಾದಿರಾ ಭಾನು ಪಲ್ಲವಿ ಪ್ರಭು, ಚನ್ನಪ್ಪ, ತಂಡದಿಂದ ಮ್ಯೂಸಿಕಲ್ ನೈಟ್ ಹಾಗೂ ಸ್ಪೇಷಲ್ ಫೈಯರ್ ಡಾನ್ಸ, ಗೋವಾ ರಾಜ್ಯದ ಯೋಗ ಪಟುಗಳಿಂದ ಯೋಗ ಪ್ರದರ್ಶನ ಜರುಗಲಿದೆ.
ಸೋಮವಾರ ಕುಮಟಾ ಹಾಗೂ ಹೊನ್ನಾವರ ತಾಲೂಕಿನ ವಿವಿಧ ಕಾಮಗಾರಿ ಪರಿಶೀಲನೆ ನಡೆಸಿ ಚಾಲನೆ ನೀಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಂಘಟಕರು ಪ್ರಕಟಣೆಯ ಮೂಲಕ ಕೋರಿದ್ದಾರೆ.
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ