ಕುಮಟಾ :ಸೌಮ್ಯ ಸ್ವಭಾವದ, ಸಹೃದಯಿ ವ್ಯಕ್ತಿತ್ವದಿಂದ ಎಲ್ಲರ ಮನ ಗೆದ್ದ ನಿವೃತ್ತ ಶಿಕ್ಷಕರಾದ ಶ್ರೀ ಚಂದ್ರಶೇಖರ ಅಚ್ಯುತ ಗಾಂವಕರ (ವಯಸ್ಸು 62) ಅನಾರೋಗ್ಯದಿಂದ ಅವರು ಇಂದು ವಿಧಿವಶರಾದರು .
ಯಲ್ಲಾಪುರದಲ್ಲಿ ಅನೇಕ ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಅನೇಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದ ಮಹಾನ್ ಗುರುಗಳಾಗಿ ಅವರು ಗುರುತಿಸಿಕೊಂಡಿದ್ದರು. ಶಿಕ್ಷಕ ಸ್ನೇಹಿತರ ಬಳಗದಲ್ಲಿ ಆತ್ಮೀಯತೆ ಹೊಂದಿದ್ದ ಅವರು, ವಿದ್ಯಾರ್ಥಿಗಳ ಹೃದಯದಲ್ಲಿ ಸದಾ ಅಚ್ಚಳಿಯದ ಗುರುತು ಮೂಡಿಸಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಸ್ವಗ್ರಾಮ ಕುಮಟಾ ತಾಲ್ಲೂಕಿನ ಎತ್ತಿನಬೈಲ್ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.

ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.
About The Author


More Stories
ಹಿರೇಗುತ್ತಿಯಲ್ಲಿ 14 ವಯೋಮಾನದ ಬಾಲಕ-ಬಾಲಕಿಯರ ಇಲಾಖಾ ಕ್ರೀಡಾಕೂಟ
ಎನ್. ರಾಮು ಹಿರೇಗುತ್ತಿಗೆ ಒಲಿದ ‘ಇಂಡಿಯಾ ಬಿಸಿನೆಸ್ ಎಕ್ಸಲೆನ್ಸ್ ಅವಾರ್ಡ್’
ಸಂಪನ್ನಗೊಂಡ ಮಿರ್ಜಾನ್ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ