March 1, 2026

ಜಾತ್ರಾ ಸಮಯದಲ್ಲಿ ಹೋಟೆಲ್ ಗಳಲ್ಲಿ ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಸಕರಿಂದ ಸೂಚನೆ.

ಶಿರಸಿ : ಜಾತ್ರಾ ಸಮಯದಲ್ಲಿ ಹೋಟೆಲ್ ಗಳಲ್ಲಿ ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿರ್ಸಿ ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಸೂಚಿಸಿದರು.

ಅವರು ತಾಲೂಕ ಆರೋಗ್ಯ ಅಧಿಕಾರಿ ಡಾಕ್ಟರ್ ಮಧುಕರ್ ಪಾಟೀಲ್ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳ ತಂಡದವರ ಜೊತೆ ಚರ್ಚಿಸಿ ಮಾತನಾಡಿದರು. ಶಿರಸಿ ಮಾರಿಕಾಂಬ ದೇವಿಯ ಜಾತ್ರೆಗೆ ದೇಶ ವಿದೇಶಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಿದ್ದು ಅವರ ಆರೋಗ್ಯ ಹಾಗೂ ನೈರ್ಮಲ್ಯದ ಕಡೆ ಗಮನಹರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಹಾಗಾಗಿ ಹೋಟೆಲ್ಗಳಲ್ಲಿ ತಿಂಡಿ ತಿನಿಸುಗಳನ್ನು ನೋಣ, ಧೂಳು, ಕೂಡದಂತೆ ತೆರೆದು ಇಡಬಾರದು. ತಣ್ಣಗಾದ ಹಳಸಿದ ಆಹಾರಗಳನ್ನು ಗ್ರಾಹಕರಿಗೆ ನೀಡಬಾರದು. ಆಹಾರ ತಿನಿಸು ಇಡುವ ಪ್ಲೇಟು ಲೋಟ ಗಳನ್ನು ಬಿಸಿ ನೀರಿನಲ್ಲಿ ಅದ್ದಿಡಬೇಕು. ಸರಕಾರದಿಂದ ನಿಷೇಧಿಸಲ್ಪಟ್ಟ ಯಾವುದೇ ಕೃತಕ ಬಣ್ಣಗಳನ್ನು ಬಳಸಬಾರದು. ಮಲಿನ ವಸ್ತುಗಳನ್ನು ಸರಿಯಾದ ರೀತಿಯಲ್ಲಿ ನಿತ್ಯವಿಲೆವಾರಿ ಮಾಡಬೇಕು. ಮುದ್ರಣ ಶಾಹಿ ಇರುವ ದಿನಪತ್ರಿಕೆ ಕರಪತ್ರ ಇನ್ನಿತರ ಯಾವುದೇ ಪೇಪರ್ಗಳಲ್ಲಿ ತಿಂಡಿ ತಿನಿಸುಗಳನ್ನು ವಿತರಿಸಬಾರದು. ಎಲ್ಲಾ ನಿಯಮಗಳನ್ನು ಎಲ್ಲಾ ಹೋಟೆಲ್ ಕ್ಯಾಂಟೀನ್ ಗಳಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಈ ನಿಟ್ಟಿನಲ್ಲಿ ಸಂಬAಧಿಸಿದ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳ ತಂಡವು ಪ್ರತಿಯೊಂದು ಹೋಟೆಲ್ ಅಂಗಡಿಗಳಿಗೆ ಭೇಟಿ ನೀಡಿ ಅಗತ್ಯ ಸಲಹೆ ಸೂಚನೆ ಮಾರ್ಗದರ್ಶನ ಮಾಡುತ್ತಿದ್ದು ಅವರು ಸೂಚಿಸಿದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಇಲ್ಲದಿದ್ದಲ್ಲಿ ಸೂಕ್ತ ಕ್ರಮ ವಹಿಸಲಾಗುವುದು ಎಂದರು.

About The Author

error: Content is protected !!