

ಭಟ್ಕಳ: ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪುರಸಭೆ ಭಟ್ಕಳ ಹಾಗೂ ಜಾಲಿ ಪಟ್ಟಣ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ‍್ಯೋತ್ಸವ ದಿನಾಚರಣೆ ಆಚರಿಸಿದರು.
79ನೇ ಸ್ವಾತಂತ್ರ‍್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ತಹಸಿಲ್ದಾರ್ ನಾಗ್ರೆಂದ ಕೋಳ ಶೆಟ್ಟಿ ನೆರವೇರಿಸಿ ಮಾತನಾಡಿದ ಅವರು ಸ್ವಾತಂತ್ರವನ್ನು ದಶಕಗಳ ಹೋರಾಟದ ನಂತರ ಗಳಿಸಲಾಯಿತು. ಇಂದು ಸಾರ್ವಭೌಮ, ಸ್ವಾವಲಂಬ ಖಚಿತತೆಯಾಗಿದೆ. ಭಾರತವೂ ತನ್ನ ಭವಿಷ್ಯವನ್ನೂ ನಿರ್ಧರಿಸುವ ಸಂಪೂರ್ಣ ಅಧಿಕಾರವನ್ನು ಸಾರ್ವಭೌಮತ್ವವನ್ನು ಖಚಿತಪಡಿಸಿಕೊಂಡಿತು. ಸ್ವಾತಂತ್ರ ದಿನಗಳ ನಂತರ ಭಾರತ ಹಲವು ಘಟ್ಟಗಳನ್ನು ತಲುಪಿದೆ. ಅಂದು ಆರ್ಥಿಕ ಕ್ಷೇತ್ರದಲ್ಲಿ ಜಿಡಿಪಿಯಲ್ಲಿ 2, 3 % ಇತ್ತು ಇಂದು 6% ಗೆ ಜಿಡಿಪಿ ತಲುಪಿದೆ. ವಿಜ್ಞಾನ-ತಂತ್ರಜ್ಞಾನದಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ನಾವು ಮುಂದುವರೆಯುತ್ತಿದ್ದೇವೆ. ಸ್ವಾತಂತ್ರ ನಂತರ ನಮ್ಮ ಶೈಕ್ಷಣಿಕ ಮಟ್ಟ ಪ್ರತಿಶತ 30%ಕ್ಕೂ ಕಡಿಮೆ ಇದ್ದು, ಇಂದಿಗೆ 70% ಪ್ರತಿಶತ ದಾಟಿದ್ದೇವೆ. ನಮ್ಮಲ್ಲಿನ ಜಾತಿ-ಧರ್ಮ-ಭೇದ ಕಡಿಮೆಯಾಗಿ ಸಾವಿಂಧಾನಿಕ ಆಶಯಗಳಿಗೆ ಅನುಗುಣವಾಗಿ ಎಲ್ಲರೂ ಶಿಕ್ಷಣವಂತರಗುತ್ತಿದ್ದಾರೆ ಎಂದರು.
ಇದಕ್ಕೂ ಪೂರ್ವದಲ್ಲಿ ಪೊಲೀಸ ಇಲಾಖೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು. ಈ ಭಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದರು. ಪಥ ಸಂಚಲನದಲ್ಲಿ ಪಾಲ್ಗೊಂಡ ಶಾಲಾ ಕಾಲೇಜು ತಂಡಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಅಲ್ತಾಫ್ ಮೊಹಿದ್ದೀನ್ ಖರೂರಿ,ಜಾಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಖಾಜಾಯಾ ಅಫ್ಸಾ ಹುಜೈಫಾ,ಭಟ್ಕಳ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷರ ರಾಜು ನಾಯ್ಕ,ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಎಂ,ಸಿಪಿಐ ಮಂಜುನಾಥ ಲಿಂಗಾರೆಡ್ಡಿ,ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ್,ಜಾಲಿ ಪಂಚಾಯತ್ ಮುಖ್ಯಾಧಿಕಾರಿ ಮಂಜಪ್ಪ ಎಸ್,ಶಿಕ್ಷಣಾ ಅಧಿಕಾರಿ ವೆಂಕಟೇಶ ನಾಯಕ,ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
More Stories
‘ಅಯ್ಯಪ್ಪಸ್ವಾಮಿ ರೂಪದ ಗಣಪ’ ಹಾಗೂ ‘ಆಪರೇಷನ್ ಸಿಂಧೂರ್ ಥೀಮ್’
ಮುಟ್ಟಳಿ ಮೂಡಭಟ್ಕಳ ಸಾರ್ವಜನಿಕ ಶೀ ಗಣೇಶೋತ್ಸವ ಸಮಿತಿಯಿಂದ ವೆಂಕಟರಮಣ ನಾಯ್ಕರಿಗೆ ಸನ್ಮಾನ
ಕಾಳಜಿ ಕೇಂದ್ರಕ್ಕೆ ಬೇಟಿ ನೀಡಿದ ಕಾಂಗ್ರೇಸ್ ಮುಖಂಡರಾದ ಮಂಜುನಾಥ ನಾಯ್ಕ