ಭಟ್ಕಳ : ಧಾರ್ಮಿಕ ಆಚರಣೆ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಮುರ್ಡೇಶ್ವರ ಬೀಚ್‌ನಲ್ಲಿ ಮಾರ್ಚ ೪ ರಂದು ಸಂಜೆ ೫ ಗಂಟೆಯಿAದ ಊರ ಜನರ ಸಹಕಾರದಿಂದ ನಮ್ಮೂರ ಹೋಳಿ ಸಂಭ್ರಮ ೨೦೨೬ ವಿಜ್ರಂಭಣೆಯಿAದ ನಡೆಸಲು ಉದ್ದೇಶಿಸಲಾಗಿದೆ ಎಂದು ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ ಎಂ ವೈದ್ಯ ಹೇಳಿದರು.

ಮುರ್ಡೇಶ್ವರದ ಆರೆನ್ನೆಸ್ ಮಿನಿಸಭಾಭವನದಲ್ಲಿ ಸೋಮವಾರ ಸಂಜೆ ಕರೆದ ಪತ್ರಿಕಾಗೋಷ್ಟಿಯಲ್ಲಿ ಹೋಳಿ ಹಬ್ಬದ ಸಂಭ್ರಮಾಚರಣೆ ಕುರಿತು ಮಾಹಿತಿ ನೀಡಿದ ಅವರು, ಮುರ್ಡೇಶ್ವರದಲ್ಲಿ ಈ ಸಲದಿಂದ ನಮ್ಮೂರ ಹೋಳಿ ಸಂಭ್ರಮವನ್ನು ವಿಜ್ರಂಭಣೆಯಿAದ ಆಚರಿಸಲಾಗುತ್ತಿದೆ. ಮಾರ್ಚ ೪ ರ ಸಂಜೆ ೫ ಗಂಟೆಗೆ ಶ್ರೀ ಮುರುಡೇಶ್ವರ ದೇವರಿಗೆ ಪೂಜೆ ಸಲ್ಲಿಸಿ ಹೋಳಿ ಸಂಭ್ರಮಕ್ಕೆ ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ಚಾಲನೆ ನೀಡಲಿದ್ದಾರೆ. ಹೋಳಿ ಸಂಭ್ರಮದಲ್ಲಿ ಹೋಳಿ ಕುಣಿತ, ಬಣ್ಣದ ಮಡಿಕೆ ಒಡೆಯುವುದು, ರಂಗೀಲಾ ಹಬ್ಬ ( ಬಣ್ಣ ಹಚ್ಚುವುದು) ಕಾಮದಹನ, ಮಳೆ ನೃತ್ಯ, ಲೈವ್ ಡಿಜೆ, ಸಮುದ್ರ ಸ್ನಾನ ಮುಂತಾದ ಕಾರ್ಯಕ್ರಮ ನಡೆಯಲಿದೆ. ಹೋಳಿ ಹಬ್ಬದ ಸಂಭ್ರಮಾಚರಣೆಯಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಹೋಳಿ ಆಡಲು ಅವಕಾಶ ಕಲ್ಪಿಸಲಾಗಿದೆ. ಹೋಳಿಯಲ್ಲಿ ಪಾಲ್ಗೊಳ್ಳುವವರು ಬಿಳೆ ಬಣ್ಣದ ಬಟ್ಟೆ ಧರಿಸಿ ಬರಬೇಕು ಎಂದ ಅವರು ಹೋಳಿ ಸಂಭ್ರಮದಲ್ಲಿ ಸಚಿವ ಮಂಕಾಳ ವೈದ್ಯರೂ ಸಹ ಪಾಲ್ಗೊಳ್ಳುತ್ತಿದ್ದು, ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳುವುದರ ಮೂಲಕ ಹೋಳಿ ಸಂಭ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಮುರುಡೇಶ್ವರ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಎಸ್ ಎಸ್ ಕಾಮತ್ ಮಾತನಾಡಿ, ಮುರುಡೇಶ್ವರ ಬೀಚಿನಲ್ಲಿ ಈ ಸಲ ಹೋಳಿ ಸಂಭ್ರಮವನ್ನು ಪ್ರವಾಸೋದ್ಯಮ ಉತ್ತೇಜನಕ್ಕಾಗಿ ವಿಜ್ರಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವೆಂದರು. ಈ ಸಂದರ್ಭದಲ್ಲಿ ಭಟ್ಕಳ ಅರ್ಬನ್ ಬ್ಯಾಂಕ್ ನಿರ್ದೇಶಕಿ ಬೀನಾ ವೈದ್ಯ, ಮಾವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷೆ ನಯನಾ ನಾಯ್ಕ, ಸತೀಶ ನಾಯ್ಕ, ನಾಗೇಶ ನಾಯ್ಕ ಮುಂತಾದವರಿದ್ದರು.

More Stories
ಮುರುಡೇಶ್ವರ ಪಾಲಿಟೆಕ್ನಿಕ್ ನಲ್ಲಿ ಒಂದು ದಿನದ ಇನ್ಕುಬೇಷನ್ ಜಾಗೃತಿ ಕಾರ್ಯಕ್ರಮ
ಮುರ್ಡೇಶ್ವರದಲ್ಲಿ ಲಾಡ್ಜ್ ಮೇಲೆ ಪೊಲೀಸ್ ದಾಳಿ: ಇಬ್ಬರು ಮಹಿಳೆಯರ ರಕ್ಷಣೆ, ರೂಮ್ ಬಾಯ್ ಬಂಧನ
ಮುರುಡೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ ಸಾವಿರಾರು ಭಕ್ತರ ದಂಡು – ಕಳೆದುಕೊಂಡವರನ್ನು ಪತ್ತೆ ಹಚ್ಚಿದ ಪೊಲೀಸರು