ಹೊನ್ನಾವರ/ಭಟ್ಕಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಶಾಖಾ ಮಠವಾದ ಭಟ್ಕಳ ತಾಲೂಕಿನ ಕರಿಕಲ್ಲಿನ ಧ್ಯಾನ ಮಂದಿರದಲ್ಲಿ ದಿನಾಂಕ 04.03.2026ರ ಬುಧವಾರದಂದು ಶ್ರೀರಾಮ ದೇವರ ಪ್ರತಿಷ್ಠಾಪನಾ ವರ್ಧಂತಿ ಉತ್ಸವವು ಅತ್ಯಂತ ವೈಭವದಿಂದ ಜರುಗಲಿದೆ.
ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠಾಧೀಶರಾದ ಪರಮಪೂಜ್ಯ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಈ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ.
ಕಾರ್ಯಕ್ರಮದ ವಿವರಗಳು:
- ಬೆಳಿಗ್ಗೆ 7:00 ಗಂಟೆಗೆ: ಲೋಕಕಲ್ಯಾಣಕ್ಕಾಗಿ ಶ್ರೀ ರಾಮತಾರಕ ಮಹಾಯಜ್ಞ ಪ್ರಾರಂಭ.
- ಬೆಳಿಗ್ಗೆ 10:00 ರಿಂದ 12:00 ರವರೆಗೆ: ಭಕ್ತಾದಿಗಳಿಂದ ಭಜನಾ ಕಾರ್ಯಕ್ರಮ.
- ಮಧ್ಯಾಹ್ನ 12:00 ಗಂಟೆಗೆ: ಪೂಜ್ಯ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಂದ ಆಶೀರ್ವಚನ.
- ಮಧ್ಯಾಹ್ನ 1:00 ಗಂಟೆಗೆ: ಮಹಾಪ್ರಸಾದ (ಅನ್ನಸಂತರ್ಪಣೆ).
ಗಣ್ಯರ ಉಪಸ್ಥಿತಿ:
ಈ ಪುಣ್ಯ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳ ಎಸ್. ವೈದ್ಯ ಅವರು ಭಾಗವಹಿಸಲಿದ್ದಾರೆ. ದಿವಂಗತ ಎಲ್.ಎಸ್. ನಾಯ್ಕರು ದಾನವಾಗಿ ನೀಡಿದ ಒಂದು ಎಕರೆ ಜಾಗದಲ್ಲಿ ಸಚಿವ ಮಂಕಾಳ ವೈದ್ಯ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಈ ಭವ್ಯ ಧ್ಯಾನ ಮಂದಿರವನ್ನು ನಿರ್ಮಿಸಿಕೊಟ್ಟಿದ್ದಾರೆ.
ಉಳಿದಂತೆ ಮಾಜಿ ಸಚಿವರಾದ ಶ್ರೀ ಶಿವಾನಂದ ನಾರಾಯಣ ನಾಯ್ಕ, ಶಾಸಕರುಗಳು, ಮಾಜಿ ಶಾಸಕರುಗಳು, ಶ್ರೀರಾಮ ಕ್ಷೇತ್ರದ ಟ್ರಸ್ಟಿಗಳು, ವಿವಿಧ ತಾಲೂಕುಗಳ ಸೇವಾ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
”ಈ ಭಕ್ತಿಪೂರ್ವಕ ಸಮಾರಂಭಕ್ಕೆ ಸಮಸ್ತ ಭಕ್ತಾದಿಗಳು ಕುಟುಂಬ ಸಮೇತರಾಗಿ ಆಗಮಿಸಿ, ಶ್ರೀರಾಮ ದೇವರ ಕೃಪೆ ಹಾಗೂ ಪೂಜ್ಯ ಶ್ರೀಗಳ ಆಶೀರ್ವಾದಕ್ಕೆ ಪಾತ್ರರಾಗಬೇಕು” ಎಂದು ಹೊನ್ನಾವರ ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ವಿನಂತಿಸಿಕೊಂಡಿದೆ.

More Stories
ಕಿರಿಯ ಪ್ರಾಥಮಿಕ ಶಾಲೆ ಯಲಕೊಟ್ಟಿಗೆ 2024 25 ನೇ ಶೈಕ್ಷಣಿಕ ವರ್ಷದ ಉತ್ತಮ ಸಾಧನೆಗಾಗಿ ಜಿಲ್ಲಾ ಮಟ್ಟದ ಉತ್ತಮ ಎಸ್. ಡಿ. ಎಂ. ಸಿ. ಪ್ರಶಸ್ತಿ
‘ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಅಗತ್ಯ’
ಹೊನ್ನಾವರದಲ್ಲಿ ಇಂದು ಆರ್ ವಿ ದೇಶಪಾಂಡೆ