

ಭಟ್ಕಳ: ತಾಲೂಕಿನ ನಗರ ಭಾಗದಲ್ಲಿ ನಡೆಯಲಿರುವ ಬೃಹತ್ ನಗರ ಹಿಂದೂ ಸಂಗಮ ಕಾರ್ಯಕ್ರಮದ ಅಂಗವಾಗಿ ಶನಿವಾರ ಪಟ್ಟಣದಲ್ಲಿ ಹಿಂದೂ ಕಾರ್ಯಕರ್ತರಿಂದ ಬೃಹತ್ ಬೈಕ್ ರ್ಯಾಲಿ ನಡೆಯಿತು.
ರ್ಯಾಲಿ ಚನ್ನಪಟ್ಟಣದ ಹನುಮಾನ್ ದೇವಸ್ಥಾನದಿಂದ ಆರಂಭವಾಗಿ ಆಸರಕೇರಿ, ಮಗ್ಗದೊಮ್ ಕಾಲೋನಿ, ಸರ್ಕಲ್, ರಂಗಿಕಟ್ಟೆ, ಹೊರುಳಿಸಾಲ್, ಸಾಗರ ರಸ್ತೆ ಮೂಲಕ ಮತ್ತೆ ಸರ್ಕಲ್ ದಾಟಿ ಪಿ.ಎಲ್.ಡಿ ಬ್ಯಾಂಕ್ ರಸ್ತೆವರೆಗೆ ಸಾಗಿತು. ಬಳಿಕ ಪುನಃ ಚನ್ನಪಟ್ಟಣ ಹನುಮಾನ್ ದೇವಸ್ಥಾನಕ್ಕೆ ಆಗಮಿಸುವ ಮೂಲಕ ರ್ಯಾಲಿ ಮುಕ್ತಾಯಗೊಂಡಿತು.


ರ್ಯಾಲಿಯಲ್ಲಿ ಹಲವು ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿ, ನಗರ ಹಿಂದೂ ಸಂಗಮ ಕಾರ್ಯಕ್ರಮಕ್ಕೆ ಸಾರ್ವಜನಿಕರನ್ನು ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ ಎಂ.ಎನ್., ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಕೃಷ್ಣಮೂರ್ತಿ, ಡಿವೈಎಸ್ಪಿ ಗಿರೀಶ್, ಸಿಪಿಐ ದಿವಾಕರ ಪಿ.ಎಂ., ಗ್ರಾಮೀಣ ಠಾಣೆ ಸಿಪಿಐ ವೆಂಕಟೇಶ್ ಎಸ್. ಮುರ್ನಾಲ್ ಹಾಗೂ ನಗರ ಠಾಣೆ ಪಿಎಸ್ಐ ನವೀನ್ ಎಸ್. ನಾಯ್ಕ ಅವರ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

About The Author




More Stories
ಶ್ರೀ ಗುರು ಸುಧೀಂದ್ರ ಕಾಲೇಜಿನ ರೋಟರಾಕ್ಟ್ ಕ್ಲಬ್ನ ನೂತನ ಪದಾಧಿಕಾರಿಗಳ ಪದಗ್ರಹಣ – ವಿದ್ಯಾರ್ಥಿಗಳು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಜೈವಿಠಲ್ ಕುಬಾಲ್ ಕರೆ*
ಅಡಿಕೆ ಕೊಯ್ಯುವಾಗ ಆಕಸ್ಮಿಕ ವಿದ್ಯುತ್ ಸ್ಪರ್ಶ: 11 ಕೆ.ವಿ. ತಂತಿಗೆ ಏಣಿ ತಾಗಿ ಕೃಷಿಕ ದಾರುಣ ಸಾವು!
ಸರ್ಕಾರಿ ನೌಕರರ ಮನ್ಸೂನ್ ಟ್ರೋಫಿ: ಎನ್ಎಸ್ಸಿ ತಂಡಕ್ಕೆ ಚಾಂಪಿಯನ್ ಪಟ್ಟ!