ಭಟ್ಕಳ: ರಂಜಾನ್ ಪೇಟೆಯ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಹೆಚ್ಚಾಗುವ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ಭಟ್ಕಳ ಶಹರ ಪೊಲೀಸ್ ಠಾಣೆ ವತಿಯಿಂದ ಕೆಲವು ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಳೆ ಬಸ್ ನಿಲ್ದಾಣ–ನಾಗಬನ–ಕಳಿ ಹನುಮಂತ ದೇವಸ್ಥಾನ ರಸ್ತೆ–ವಿವಿ ರೋಡ್ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಸುಲ್ತಾನ್ ಸ್ಟ್ರೀಟ್‌ನ ಮುಸ್ಟಾ ಕ್ರಾಸ್‌ನಿಂದ ರಂಜಾನ್ ಮಾರ್ಕೆಟ್ ಕಡೆಗೆ ಬರುವ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮಾರಿಕಟ್ಟದಿಂದ ಹೂವಿನ ಚೌಕವರೆಗಿನ ರಸ್ತೆಯನ್ನು ಏಕಮುಖ ಸಂಚಾರವಾಗಿ ಘೋಷಿಸಲಾಗಿದೆ. ಅಲ್ಲದೇ ಮಾರಿಕಟ್ಟದಿಂದ ನಾಗಬನದ ಕಡೆಗೆ ಬರುವ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಹಳೆ ಬಸ್ ನಿಲ್ದಾಣದಿಂದ ನಾಗಬನ ರಸ್ತೆಯವರೆಗೆ ಎರಡೂ ಬದಿಗಳಲ್ಲಿ ವಾಹನ ನಿಲುಗಡೆಗೂ ನಿರ್ಬಂಧ ವಿಧಿಸಲಾಗಿದೆ.
ವಾಹನ ಪಾರ್ಕಿಂಗ್‌ಗಾಗಿ ಪುರಸಭೆಯ ಹಿಂಭಾಗದಲ್ಲಿರುವ ಅಂಜುಮಾನ್ ಆಂಗ್ಲೋ ಮಾಧ್ಯಮ ಪ್ರೌಢಶಾಲೆಯ ಮೈದಾನ ಹಾಗೂ ಆಟೋರಿಕ್ಷಾ ಚಾಲಕ ಮಾಲಕ ಸಂಘದ ಪಬ್ಲಿಕ್ ಚಬುತರ್ ಪ್ರದೇಶದಲ್ಲಿ ಸಂಜೆ 4ರಿಂದ ರಾತ್ರಿ 3ರವರೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗಬನದಿಂದ ಮಾರಿಕಟ್ಟವರೆಗಿನ ರಸ್ತೆಯಲ್ಲಿ ಇರುವ ಮನೆಗಳಿಗೆ ವಾಹನ ಪಾಸ್ ವಿತರಿಸಲಾಗುತ್ತದೆ. ಪಾಸ್ ಪಡೆದವರು ಸಂಜೆ 8ರವರೆಗೆ ಮಾತ್ರ ದ್ವಿಚಕ್ರ ವಾಹನ ಬಳಸಲು ಅವಕಾಶವಿದ್ದು, ನಾಲ್ಕು ಚಕ್ರ ಹಾಗೂ ಭಾರಿ ವಾಹನಗಳನ್ನು ಬಳಸಬಾರದು ಎಂದು ಸೂಚಿಸಲಾಗಿದೆ. ಇದೇ ಮಾರ್ಗದಲ್ಲಿರುವ ಅಂಗಡಿಗಳಿಗೆ ಪಾಸ್ ನೀಡಲಾಗುತ್ತಿದ್ದು, ಪ್ರತಿ ಅಂಗಡಿಗೆ ಒಂದು ದ್ವಿಚಕ್ರ ವಾಹನ ಮಾತ್ರ ಬಳಸಲು ಅವಕಾಶ ಇದೆ.
ಅಂಗಡಿಗಳಿಗೆ ಅಗತ್ಯ ವಸ್ತುಗಳನ್ನು ಬೆಳಿಗ್ಗೆ 6ರಿಂದ 10 ಗಂಟೆಯೊಳಗೆ ಸಾಗಿಸಲು ಸೂಚಿಸಲಾಗಿದ್ದು, ಸಂಚಾರ ಸುಗಮತೆಗೆ ಸಾರ್ವಜನಿಕರು ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

More Stories
ಸಚಿವರ ತೇಜೋವಧೆಗೆ ಸಾಮಾಜಿಕ ಜಾಲತಾಣ ಬಳಕೆ ಖಂಡನೀಯ: ಗೋವಿಂದ ನಾಯ್ಕ
ನಿವೃತ್ತ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ
ನಗರ ಹಿಂದೂ ಸಂಗಮ ಯಶಸ್ಸಿಗೆಸಹಕರಿಸಿದ ಪೊಲೀಸರಿಗೆ ಧನ್ಯವಾದ