

ಹೊನ್ನಾವರ; ತಾಲೂಕಿನ ನಗರಬಸ್ತಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಾಡಗೇರಿ ಗ್ರಾಮದಲ್ಲಿ ಏರಗನ್ ಮೂಲಕ ಗುಂಡು ತಗುಲಿ ಯುವಕನೊರ್ವ ಮೃತಪಟ್ಟ ಘಟನೆ ಶನಿವಾರ ಸಾಯಂಕಾಲ ನಡೆದಿದೆ. ಮೃತಪಟ್ಟ ಯುವಕನನ್ನು ಹಾಡಗೇರಿ ನಿವಾಸಿಯಾದ ಸುಬ್ರಹ್ಮಣ್ಯ ಮಂಜುನಾಥ ಮರಾಠಿ( 19 ವರ್ಷ) ಎಂದು ತಿಳಿದು ಬಂದಿದೆ. ತೋಟಕ್ಕೆ ಬಂದ ಮಂಗನನ್ನು ಓಡಿಸಲು ಇಟ್ಟುಕೊಂಡಿದ್ದ ಏರ್ ಗನ್ ಸಿಡಿದು ಗುಂಡು ಹಾರಿ ಸಾವನ್ನಪ್ಪಿದ್ದಾರೆ ಎಂದು ಈತನ ಕುಟುಂಬ ಸದಸ್ಯರು ಹೇಳಿಕೆ ನೀಡುತ್ತಿದ್ದಾರೆ.

ಹೊನ್ನಾವರ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದೆ. ಸ್ಥಳದಲ್ಲಿ ಪಿ.ಐ ಸಿದ್ದರಾಮೇಶ್ವರ ಹಾಗೂ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಭದ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆಸಿದ್ದಾರೆ.

ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

About The Author




More Stories
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕೆನರಾ ಎಕ್ಸಲೆನ್ಸ್ ಪಿಯು ಕಾಲೇಜು ಪ್ರಥಮ, ರಾಜ್ಯ ಮಟ್ಟಕ್ಕೆ ಆಯ್ಕೆ!
ಡಿ. ದೇವರಾಜ ಅರಸು 111ನೇ ಜನ್ಮದಿನಾಚರಣೆ: ಸಾಧಕರ ಸ್ವಗೃಹದಲ್ಲೇ ಸನ್ಮಾನಿಸಿ ಗೌರವಿಸಿದ ಅರಸು ವಿಚಾರ ವೇದಿಕೆ.
ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ: ಹೊನ್ನಾವರದಲ್ಲಿ ಮಾಜಿ ಸಿಎಂ ಜನ್ಮದಿನಾಚರಣೆ.