March 29, 2026

ಆರ್ ವಿ ದೇಶಪಾಂಡೆ ಹುಟ್ಟುಹಬ್ಬ ಆಚರಣೆ: ಬ್ಲಾಕ್ ಕಾಂಗ್ರೆಸ ವತಿಯಿಂದ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ.

ದಾಂಡೇಲಿ: ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರ
79ನೇ ಜನ್ಮ ದಿನಾಚರಣೆಯ ನಿಮಿತ್ತ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಕ್ ಕತ್ತರಿಸಿ ಸಿಹಿಯನ್ನು ಹಂಚಿ ಆರ್.ವಿ. ದೇಶಪಾಂಡೆ ಯವರ ಜನ್ಮದಿನಾಚರಣೆಯನ್ನು ಸೋಮವಾರ ಆಚರಿಸಲಾಯಿತು.

ಅನಂತರ ನಗರದ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು
ಹಂಪಲನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ ನಾಡು ಕಂಡ ಶ್ರೇಷ್ಠ ರಾಜಕಾರಣಿ ತಮ್ಮ ಸುಧೀರ್ಘ ರಾಜಕಾರಣದಲ್ಲಿ
ಕ್ಷೇತ್ರದ ಅಭಿವೃದ್ಧಿಗೆ ತಮ್ಮನ್ನು ತಾವು ಅತ್ಯಂತ ಪ್ರಾಮಾಣಿಕವಾಗಿ,ಬದ್ಧತೆಯಿಂದ ತೊಡಗಿಸಿಕೊಂಡಿದ್ದಾರೆ. ದಾಂಡೇಲಿಯ ಸಮಗ್ರ
ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು, ನೂರಾರು ಕೋಟಿ ರೂಪಾಯಿ ಅನುದಾನ ತಂದಿರುವುದನ್ನು ಯಾರು ಮರೆಯುವಂತಿಲ್ಲ.
ಭಗವಂತನು ಅವರಿಗೆ ಇನ್ನಷ್ಟು ಆಯುಷ್ಯ, ಆರೋಗ್ಯದಯಪಾಲಿಸಲಿ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಆರ್.ಪಿ. ನಾಯ್ಕ, ಕೆಪಿಸಿಸಿ ಸದಸ್ಯ ಕರೀಂ ಅಜೇಕರ, ಬ್ಲಾಕ್ಕಾಂಗ್ರೆಸ್ ಉಪಾಧ್ಯಕ್ಷ ಬಶೀರ್ ಗಿರಿಯಾಲ ಮತ್ತು ಅಡಿವೆಪ್ಪ
ಭದ್ರಕಾಳಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೀರ್ತಿಗಾಂವಕರ, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ರಿಯಾಜ್ ಬಾಬು ಸೈಯದ್, ಅನಿಲ ದಂಡಗಲ್, ಬ್ಲಾಕ್ ಕಾಂಗ್ರೆಸ್ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಬಂದಂ, ನಗರ ಸಭೆ ಮಾಜಿ ಅಧ್ಯಕ್ಷೆ ಯಾಸ್ಮಿನ್ ಕಿತ್ತೂರ್, ದಾದಾಫೀರ್ ನದಿ ಮುಲ್ಲಾ ರಾಮಲಿಂಗ ಜಾಧವ, ಶಿಲ್ಪಾ ಕೊಡೆ, ಆಫೀನ್ ಕಿತ್ತೂರ್ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

About The Author

error: Content is protected !!