
ಹೊನ್ನಾವರ: ಹದಿಹರೆಯದವರು, ಯುವಜನಾಂಗ ಮತ್ತು ಮಹಿಳೆಯರು ಹೆಚ್ಚಾಗಿ ತಂಬಾಕು ಉತ್ಪನ್ನಗಳಿಗೆ ದಾಸರಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ತಂಬಾಕು, ಧೂಮಪಾನ ಮತ್ತು ಮಧ್ಯಪಾನ ಚಟದಿಂದ ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಡಾ. ವೈಶಾಲಿ ನಾಯ್ಕ ಹೇಳಿದರು.
ಅವರು ತಾಲೂಕಿನ ಎಸ್.ಡಿ.ಎಂ. ಪದವಿ ಕಾಲೇಜಿನಎಸ್.ಎಸ್.ಎಸ್. ಘಟಕ ಮತ್ತು ಭಾರತೀಯ ವೈದ್ಯಕೀಯ ಸಂಘ, ಹೊನ್ನಾವರದ ಸಹಯೋಗಲದಲ್ಲಿ ನಡೆದ‘ನಶಾ ಮುಕ್ತ ಭಾರತಅಭಿಯಾನ’ದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಸಿಗರೇಟಿನಲ್ಲಿ 4000 ಕ್ಕಿಂತ ಹೆಚ್ಚು ಕೆಮಿಕಲ್‌ಗಳಿರುತ್ತವೆ. ತಂಬಾಕು ಸೇವನೆಯಿಂದ ವ್ಯಕ್ತಿಯ ಮಾನಸಿಕ, ದೈಹಿಕ ಕ್ಷಮತೆ ಕುಗ್ಗುತ್ತದೆ. ತಂಬಾಕು ವ್ಯಸನಿಗಳು ವಿವಿಧ ಕ್ಯಾನ್ಸರ್, ಪಾರ್ಶ್ವವಾಯು, ಹೃದಯಾಘಾತಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆೆ. ಆದ್ದರಿಂದ ತಂಬಾಕು ಸೇವನೆ ತ್ಯಜಿಸಿ ಆರೋಗ್ಯ ಗಳಿಸಲು ಅವರು ಕರೆ ನೀಡಿದರು.
ಐ.ಕ್ಯೂ.ಎ.ಸಿ. ಕೋ-ಆರ್ಡಿನೇಟರ್ ಡಾ. ಸುರೇಶ್‌ಎಸ್. ‘ನಶಾ ಮುಕ್ತ ಭಾರತ ಅಭೀಯಾನ’ದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ನಾಗರಾಜ ಹೆಗಡೆ ಅಪಗಾಲ ಎಲ್ಲರನ್ನು ಸ್ವಾಗತಿಸಿ ದಿಕ್ಸೂಚಿ ನುಡಿಗಳನ್ನಾಡಿದರು. ಕಾಲೇಜಿನ ಪ್ರಾಚಾರ್ಯರಾದ ಡಾ. ಡಿ. ಎಲ್. ಹೆಬ್ಬಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಶಾಂತ ಮೂಡಲಮನೆ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾಧರ ಕಡತೋಕಾ ವಂದಿಸಿದರು.
More Stories
‘ಅಯ್ಯಪ್ಪಸ್ವಾಮಿ ರೂಪದ ಗಣಪ’ ಹಾಗೂ ‘ಆಪರೇಷನ್ ಸಿಂಧೂರ್ ಥೀಮ್’
ಮುಟ್ಟಳಿ ಮೂಡಭಟ್ಕಳ ಸಾರ್ವಜನಿಕ ಶೀ ಗಣೇಶೋತ್ಸವ ಸಮಿತಿಯಿಂದ ವೆಂಕಟರಮಣ ನಾಯ್ಕರಿಗೆ ಸನ್ಮಾನ
ಕಾಳಜಿ ಕೇಂದ್ರಕ್ಕೆ ಬೇಟಿ ನೀಡಿದ ಕಾಂಗ್ರೇಸ್ ಮುಖಂಡರಾದ ಮಂಜುನಾಥ ನಾಯ್ಕ