ಹೊನ್ನಾವರ : ತಾಲೂಕಿನ ಹಳದೀಪುರ ಅಗ್ರಹಾರ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ನವಿಲಗೋಣ ಗ್ರಾಮದ ಚಿಪ್ಪಿಹಕ್ಕಲ್ ನಿವಾಸಿ ವೆಂಕಟೇಶ ಗೋಪಾಲಕೃಷ್ಣ ವೈದ್ಯ ಮೃತಪಟ್ಟ ವ್ಯಕ್ತಿಎಂದು ತಿಳಿದುಬಂದಿದೆ. ಅಡುಗೆ ಕೆಲಸ ಮಾಡುತ್ತಿದ್ದ ಇವರು, ಮನೆಯಿಂದ ಹಳದೀಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬೈಕ್ ಸವಾರ ಹೆಲ್ಮೆಟ್ ಧರಿಸದ ಕಾರಣ ತಲೆ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಮೃತದೇಹವನ್ನು ತಾಲೂಕ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಈ ಸಂಭದ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ಕಾನಗೋಡ ಶ್ರೀ ಚೆನ್ನಕೇಶವ ದೇವರ ನೂತನ ಮಹಾದ್ವಾರ ಲೋಕಾರ್ಪಣೆ
ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನ ದಿನಾಚರಣೆ
ಮೇ 9ರಂದು ಚಿತ್ರದುರ್ಗದಲ್ಲಿ “ಬಿ.ಎಸ್.ವೈ ಅಭಿಮಾನೋತ್ಸವ”