ಹೊನ್ನಾವರ: ತಾಲೂಕಿನ ಗೇರುಸೊಪ್ಪ ಶ್ರೀ ಕ್ಷೇತ್ರ ಬಂಗಾರಮಕ್ಕಿ ಶ್ರೀ ವೀರಾಂಜನೇಯ ದೇವಸ್ಥಾನದಲ್ಲಿ ಮಾರ್ಚ್ 27ರಿಂದ ಏಪ್ರಿಲ್ 2ರ ವರೆಗೆ ನಡೆಯಲಿರುವ ‘ಸಂಸ್ಕೃತಿ ಕುಂಭ – ಮಲೆನಾಡ ಉತ್ಸವ 2026’ ಕಾರ್ಯಕ್ರಮದ ಎರಡನೇ ದಿನವಾದ ಶನಿವಾರ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಸಾಹಿತ್ಯೋತ್ಸವ ಕಾರ್ಯಕ್ರಮದ ಉದ್ಘಾನೆ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಸಾಹಿತ್ಯ ಗೋಷ್ಠಿ, ಕವಿಗೋಷ್ಠಿ, ಮಕ್ಕಳ ಕವಿಗೋಷ್ಠಿಗಳನ್ನು ಆಯೋಜಿಸಲಾಗಿದೆ. ನಾಡಿನ ಹಲವು ಹಿರಿಯ ಸಾಹಿತಿಗಳು, ಲೇಖಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಎಂದಿನಂತೆ ಸಂಜೆಯ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗಿನ ಕಾರ್ಯಕ್ರಮದಲ್ಲಿ ಸಾಹಿತ್ಯ – ಸಂಸ್ಕೃತಿ – ಪರಂಪರೆ ಕುರಿತು ಚರ್ಚಾಗೋಷ್ಠಿ ನಡೆಯಲಿದೆ. ಸಾಹಿತಿಗಳು, ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶ್ರೀ ಕ್ಷೇತ್ರ ಬಂಗಾರಮಕ್ಕಿ ಪ್ರಕಟನೆ ತಿಳಿಸಿದೆ.

More Stories
ಬೃಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತಾ ಚಿಕಿತ್ಸಾ ಸಮಾವೇಶ
ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ: ವಡ್ನಾಳ್ ಜಗದೀಶ್
ಒಗ್ಗಟ್ಟು ಮೀನುಗಾರರ ಅಸ್ತಿತ್ವದ ಪ್ರಶ್ನೆ: ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿ