
ಹರಿದು ಬಂದ ಭಕ್ತ ಸಾಗರ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಕ್ಷೇತ್ರಕ್ಕೆ ಭೇಟಿ.
ಉದ್ಭವ ಬೋಳಾರೇ ರಂಗನಾಥಸ್ವಾಮಿ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿ ಕೆಲಸ ಮಾಡುವೆ.
ಕೃಷ್ಣರಾಜಪೇಟೆ: ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಬೂಕನಕೆರೆ ಹೋಬಳಿಯ ಬೆಟ್ಟದಹೊಸೂರು ಗ್ರಾಮದ ಶ್ರೀ ಉದ್ಭವ ಬೋಳಾರೆ ರಂಗನಾಥ ಸ್ವಾಮಿ ಯವರ 11ನೇ ವರ್ಷದ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿAದ ಅದ್ದೂರಿಯಾಗಿ ನಡೆಯಿತು.
ರಾಜ್ಯದ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಬೆಟ್ಟದಹೊಸೂರು ಗ್ರಾಮದ ಬೋಳಾರೆ ಶ್ರೀರಂಗನಾಥ ಸ್ವಾಮಿ ಸುಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದು ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದರು.
ಬ್ರಹ್ಮರಥೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ ಅವರು ಹಬ್ಬ ಹರಿದಿನಗಳು, ಜಾತ್ರೆ, ಉತ್ಸವ ಹಾಗೂ ರಥೋತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಹಬ್ಬದ ಸಂಭ್ರಮದಲ್ಲಿ ಜಾತಿ, ಮತ ಪಂಥಗಳಿAದ ಮುಕ್ತವಾಗಿ, ಮೇಲು-ಕೀಳೆಂಬ ಭೇದ ಭಾವವಿಲ್ಲದೇ, ಎಲ್ಲರೂ ಒಂದಾಗಿ ಜಾತ್ರೆಯಲ್ಲಿ ಭಾಗವಹಿಸಿದಾಗ ಪರಸ್ಪರ ಸ್ನೇಹ ಸೌಹಾರ್ದತೆ ಹಾಗೂ ಪ್ರೀತಿ ವಿಶ್ವಾಸ, ಬಾಂಧವ್ಯಗಳು ವೃದ್ಧಿಯಾಗುವುದಲ್ಲದೆ, ಸಮಾಜದಲ್ಲಿ ಶಾಂತಿ ಸೌಹಾರ್ದತೆಯ ವಾತಾವರಣ ನಿರ್ಮಾಣವಾಗಲಿದೆ. ಬೋಳಾರೆ ಶ್ರೀರಂಗನಾಥಸ್ವಾಮಿ ಸುಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಅನುದಾನವನ್ನು ಸರ್ಕಾರದ ವತಿಯಿಂದ ದೊರಕಿಸಿಕೊಡಲು ಪ್ರಾಮಾಣಿಕವಾದ ಪ್ರಯತ್ನ ಮಾಡುವುದಾಗಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.
ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಕೆಬಿ ಚಂದ್ರಶೇಖರ್ ಉದ್ಭವ ಶ್ರೀ ಬೋಳಾರೆ ರಂಗನಾಥ ಸ್ವಾಮಿ ಕ್ಷೇತ್ರದ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬೂಕನಕೆರೆ ಬಿ.ಟಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಂ.ಆರ್ ಸುದರ್ಶನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಿ. ನಾಗೇಂದ್ರ ಕುಮಾರ್, ಸರ್ವ ಮಂಗಳ ವೆಂಕಟೇಶ್, ಸ್ವಾಮಿ ಗೌಡ, ನಾಗೇಶ್, ಮಹೇಶ್, ರಂಗಸ್ವಾಮಿ ಪಾಪಯ್ಯ, ಚೇತನಾ ಮಹೇಶ್, ತಹಶೀಲ್ದಾರ್ ಡಾ.ಅಶೋಕ್ ಸೇರಿದಂತೆ 10,000ಕ್ಕೂ ಹೆಚ್ಚಿನ ಭಕ್ತಾದಿಗಳು ಬ್ರಹ್ಮರಥೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನವನ್ನು ಪಡೆದು ಅನ್ನಪ್ರಸಾದ ಸ್ವೀಕರಿಸಿ ಕೃತರ್ಥರಾದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.
More Stories
ಶ್ರೀ ಕಿಕ್ಕೇರಮ್ಮ ಕ್ರಿಕೆಟರ್ಸ್ ವತಿಯಿಂದ ಕಿಕ್ಕೇರಿ ಪ್ರೀಮಿಯರ್ ಲೀಗ್ ಸೀಸನ್ 1
ಶಾಲಾ ಮಕ್ಕಳಿಗೆ ಉಪಯೋಗಕ್ಕೆ ಬಾರದ ಶೌಚಾಲಯ
ಪ್ರೆಂಡ್ಸ್ ರಿಕ್ರಿಯೇಶನ್ ಕ್ಲಬ್ (ರಿ), ಕಿಕ್ಕೇರಿ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ